ಪಿರಿಯಾಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಚುಂಚಶ್ರೀ ಮಹಿಳಾ ಒಕ್ಕಲಿಗರ ಸಂಘ ಏರ್ಪಡಿಸಿದ್ದ ಸಂಘದ ವಾರ್ಷಿಕೋತ್ಸವ, ಕುವೆಂಪು ಜಯಂತಿ, ಶ್ರೀಬಾಲಗಂಗಾಧರನಾಥ ಸ್ವಾಮೀಜಿಗಳ 13ನೇ ವರ್ಷದ ಸದ್ಭಾವನಾ ದಿವಸ ಕಾರ್ಯಕ್ರಮವನ್ನು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಉದ್ಘಾಟಿಸಿದರು. ಸಂಘದ ಅಧ್ಯಕ್ಷೆ ಉಷಾ, ಗೌರವಧ್ಯಕ್ಷೆ ಜ್ಯೋತಿ, ಖಜಾಂಚಿ ಲೀಲಾ, ಡಾ.ಶೋಭಾ ಇತರರು ಇದ್ದರು.
- Vokkaligara Association Anniversary
- chunchashree
ಪಿರಿಯಾಪಟ್ಟಣ: ಮಹಿಳೆಯರು ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನಾಂಗದ ಬಡವರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.
ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಚುಂಚಶ್ರೀ ಮಹಿಳಾ ಒಕ್ಕಲಿಗರ ಸಂಘ ಏರ್ಪಡಿಸಿದ್ದ ಸಂಘದ ವಾರ್ಷಿಕೋತ್ಸವ, ಕುವೆಂಪು ಜಯಂತಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ 13ನೇ ವರ್ಷದ ಸದ್ಭಾವನಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಇಂದು ಉದ್ಯಮ, ಖಾಸಗಿ ಉದ್ಯೋಗ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಸಂಘವು ಮುಂದಿನ ದಿನಗಳಲ್ಲಿ ತನ್ನ ಚಟುವಟಿಕೆಯನ್ನು ವಿಸ್ತರಿಸಲು ಅಗತ್ಯವಾದ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಶೋಭಾ ಮಾತನಾಡಿ, ಬಾಹ್ಯಾಕಾಶದಿಂದ ಹಿಡಿದು ಜಲಂತರ್ಗಾಮಿಯವರೆಗೂ, ವಿಜ್ಞಾನ, ಕಲೆ, ಸಂಗೀತ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನು ಹೆಚ್ಚಾಗಬೇಕಿದೆ ಎಂದರು.
ಸಂಘದ ಅಧ್ಯಕ್ಷೆ ಉಷಾ, ಗೌರವಧ್ಯಕ್ಷೆ ಜ್ಯೋತಿ, ಖಜಾಂಚಿ ಲೀಲಾ, ನಿರ್ದೇಶಕರಾದ ಸುಷ್ಮಾ, ನಮಿತಾ, ಮನು, ಶೋಭಾ, ಹೇಮಾ, ಮೀನಾಕ್ಷಿ, ಯಶೋಧ, ಡಾ.ಪೂಜಾ ವಿಕ್ರಮ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಒಕ್ಕಲಿಗರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಎಸ್.ಕೃಷ್ಣೆಗೌಡ, ಮಂಜುನಾಥ್, ಮಾಜಿ ಅಧ್ಯಕ್ಷ ಉದಯ್, ರಾಜೇಶ್ ಮತ್ತು ಸದಸ್ಯರು ಹಾಜರಿದ್ದರು.