ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.5, 6 ರಂದು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಜ.5 ರಂದು ಬೆಳಗ್ಗೆ 10.55ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಕುಲಾಲ ಗುಂಡ ಬ್ರಹ್ಮಾರ್ಯ ಕುಂಬಾರರ ಸಂಘದ ವತಿಯಿಂದ ಕರ್ನಾಟಕ ಕಲಾಮಂದಿರದ ಆವರಣದಲ್ಲಿ ಆಯೋಜಿಸಿರುವ 75ನೇ ವರ್ಷದ ಅಮೃತ ಮಹೋತ್ಸವ ಹಾಗೂ ರಾಜ್ಯ ಕುಂಬಾರರ ಮಹಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಜ.6 ರಂದು ಬೆಳಗ್ಗೆ 10.30ಕ್ಕೆ ಡಾ.ಕೆ ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಭವನದಲ್ಲಿ ಆಯೋಜಿಸಲಾಗಿರುವ ನೂತನ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.