ಮುಖ್ಯಮಂತ್ರಿ ಸಿದ್ದರಾಮಯ್ಯ 
ಮೈಸೂರು

ಸಿಎಂ ಸಿದ್ದರಾಮಯ್ಯ ನ.20, 21 ರಂದು ಮೈಸೂರು ಜಿಲ್ಲಾ ಪ್ರವಾಸ

ಪ್ರಮುಖ ಮುಖ್ಯಾಂಶಗಳು

  • ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ
  • ನ.20 ರಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮನ
  • ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನ.20 ಮತ್ತು 21 ರಂದು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ನ.20 ರಂದು ಮಧ್ಯಾಹ್ನ 3.20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನ.21 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿರುವ ಮೈಸೂರು ಜಿಲ್ಲಾ ಬಿ.ಸಿ.ಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ, ಡಿ.ದೇವರಾಜ ಅರಸು-ಎಲ್.ಜಿ ಹಾವನೂರು ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 3.30ಕ್ಕೆ ರಾಮಕೃಷ್ಣ ಆಶ್ರಮದ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಿರುವ ರಾಮಕೃಷ್ಣ ಆಶ್ರಮದ ಶತಮಾನೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಗಾಂಧಿ ಪರಿಷತ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಆಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ-ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ.ಮಲ್ಲೇಶ್ ರಚನೆಯ ಗಾಂಧೀ ಪ್ರಣೀತ ಧರ್ಮದರ್ಶಿತ್ವ ಮತ್ತು ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕಗಳ ಇಂಗ್ಲೀಷ್ ಅನುವಾದಿತ ಕೃತಿಗಳ ಬಿಡುಗಡೆ ಮಾಡಲಿದ್ದಾರೆ.