ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಖಂಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ಚೌಕದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ತೀರ್ಮಾನವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ದೃಢ ನಿಲುವು ತಾಳಬೇಕು ಹಾಗೂ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಮ.ಗು. ಸದಾನಂದಯ್ಯ, ಉಪಾಧ್ಯಕ್ಷೆ ಸವಿತಾ ಪ.ಮಲ್ಲೇಶ್, ಕಾರ್ಯದರ್ಶಿ ಲೋಕೇಶ್, ಸಹ ಕಾರ್ಯದರ್ಶಿ ಎಸ್.ಬಾಲಕೃಷ್ಣ, ಪದಾಧಿಕಾರಿಗಳಾದ ಸಿದ್ದಪ್ಪ, ನಂದೀಶ್ವರ ಇತರರಿದ್ದರು.
ಹಾರ್ಡಿಂಜ್ ವೃತ್ತದಲ್ಲಿ ಧರಣಿ:
ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭಾನುವಾರ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮುಖಂಡರಾದ ತೇಜಸ್ ಲೋಕೇಶ್ ಗೌಡ, ಮೂಗೂರು ನಂಜುಂಡಸ್ವಾಮಿ, ಪಾರ್ಥಸಾರಥಿ, ಗೋಪಿನಾಥ್ ಇತರರಿದ್ದರು.