ಮಲೇಷ್ಯಾದಲ್ಲಿ ನಡೆಲಿರುವ ನೃತ್ಯಪ್ರದರ್ಶನಕ್ಕೆ ಆಯ್ಕೆಯಾಗಿರುವ ಪಿರಿಯಾಪಟ್ಟಣ ತಾಲೂಕು ಸುಂಡ್ವಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈಚೂರು ಲೋಕೇಶ್, ಮಹಾದೇವ್, ಸುರೇಶ್, ಮಹದೇವ್, ಸ್ವಾಮಿಗೌಡ ಇದ್ದರು.
ರಾವಂದೂರು: ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕು ಸುಂಡವಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಲೇಶಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ನೃತ್ಯ ಪ್ರದರ್ಶನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದಿಸಿ ಮಾತನಾಡಿದರು.
ಗ್ರಾಮೀಣ ಮಕ್ಕಳಲ್ಲಿ ಉತ್ತಮ ಪ್ರತಿಭೆ ಇದೆ. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಇದೆ. ಇದನ್ನು ಗ್ರಾಮೀಣ ಜನರು ಅರಿತು ಸದುಪಯೋಗಪಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿದ್ದು ಪ್ರತಿಭೆ ಪ್ರೋತ್ಸಾಹಿಸಲು ಶಿಕ್ಷಕರ ಆಸಕ್ತಿ ಮುಖ್ಯ ಎಂದರು.
ಈ ವೇಳೆ ಇತ್ತೀಚೆಗೆ ನಡೆದ ಮೈಸೂರಿನಲ್ಲಿ ನೃತ್ಯ ಪ್ರದರ್ಶನದಲ್ಲಿ ಪ್ರಥಮ ಸ್ಥಾನ, ಪಾಂಡಿಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಪರಿಸರ ಜಾಗೃತಿ ನೃತ್ಯ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಪಡೆದು ಮಲೇಷಿಯಾದ ಅಂತಾರಾಷ್ಟ್ರೀಯ ಮಟ್ಟದ ಮುಖ್ಯಪ್ರದರ್ಶನದಲ್ಲಿ ಭಾಗವಹಿಸಲು ಸಜ್ಜಾಗಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಕುರಿ ಮತ್ತು ಉಣ್ಣೆ ನಿಗಮ ಮಂಡಳಿ ಅಧ್ಯಕ್ಷ ಮಹಾದೇವ್, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಯಜಮಾನರಾದ ಮಹದೇವ್, ಸ್ವಾಮಿಗೌಡ, ಪ್ರಕಾಶ್, ಬೀರೇಶ್, ಮುಖ್ಯಶಿಕ್ಷಕ ರವಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಇದ್ದರು.