ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ವೇದಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಭಾವಚಿತ್ರಕ್ಕೆ ಸಂಸ್ಕೃತಿ ಚಿಂತಕಿ ದೀಪಿಕಾ ಮಾಧವ್ ಪಾಂಡುರಂಗಿ ಪುಷ್ಪಾರ್ಚನೆ ನೆರವೇರಿಸಿದರು.  
ಮೈಸೂರು

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಮೈಸೂರು: ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ವೇದಿಕೆಗಳ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಸಮಾರಂಭ ಉದ್ಘಾಟಿಸಿದ ಸಂಸ್ಕೃತಿ ಚಿಂತಕಿ ದೀಪಿಕಾ ಮಾಧವ್ ಪಾಂಡುರಂಗಿ ಮಾತನಾಡಿ, ಶಿಕ್ಷಣವು ಪದವಿ ಗಳಿಸುವುದಕ್ಕಷ್ಟೇ ಸೀಮಿತವಾಗದೆ ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆಗೈಯಲು ಪ್ರಮುಖ ವೇದಿಕೆಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಗುರಿ ಸಾಧಿಸಲು ಸಾಂಸ್ಕೃತಿಕ ವೇದಿಕೆಗಳು ಪ್ರಮುಖ ಪಾತ್ರವಹಿಸುತ್ತವೆ. ಪರ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಗೌರವಿಸುವುದರೊಂದಿಗೆ ಕನ್ನಡ ಸಂಸ್ಕೃತಿ ಮತ್ತು ಭಾಷೆಯ ಅಸ್ತಿತ್ವ ಉಳಿಸಿಕೊಳ್ಳುವುದೇ ಕನ್ನಡ ಅಸ್ಮಿತೆಯಾಗಿದೆ ಎಂದರು.
ಅಂತಾರಾಷ್ಟ್ರೀಯ ಯೋಗಪಟು ಎಚ್. ಖುಷಿ ಮಾತನಾಡಿ, ಯೋಗದಿಂದ ಏಕಾಗ್ರತೆ, ದೃಢವಿಶ್ವಾಸ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ವಿಶೇಷ ವಿದ್ಯಾರ್ಥಿ ವೇತನ ಹಾಗೂ ಸರ್ಕಾರಿ ಉದ್ಯೋಗಗಳನ್ನು ಪಡೆಯುವ ಸದಾವಕಾಶವಿದೆ ಎಂದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಲ
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಗುರುಪಾದಸ್ವಾಮಿ, ಪದವಿ ಕಾಲೇಜಿನ ಪ್ರಾಚಾರ್ಯ ಡಾ. ರೇಚಣ್ಣ, ಸಾಂಸ್ಕೃತಿಕ, ಸಾಹಿತ್ಯಕ ಸಮಿತಿ ಸಂಚಾಲಕಿ ಎಂ.ಮಂಜುಳಾ, ದೈಹಿಕ ಶಿಕ್ಷಣ ಶಿಕ್ಷಕ ಎಂ.ಶಿವಕುಮಾರಸ್ವಾಮಿ ಇದ್ದರು.
ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ, ಸಾಹಿತ್ಯಕ ಹಾಗೂ ಕ್ರೀಡಾ ವೇದಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಭಾವಚಿತ್ರಕ್ಕೆ ಸಂಸ್ಕೃತಿ ಚಿಂತಕಿ ದೀಪಿಕಾ ಮಾಧವ್ ಪಾಂಡುರಂಗಿ ಪುಷ್ಪಾರ್ಚನೆ ನೆರವೇರಿಸಿದರು. ಎಚ್. ಖುಷಿ, ಬಿ.ನಿರಂಜನಮೂರ್ತಿ, ಟಿ.ಗುರುಪಾದಸ್ವಾಮಿ, ಡಾ. ರೇಚಣ್ಣ, ಎಂ.ಮಂಜುಳಾ, ಎಂ.ಶಿವಕುಮಾರಸ್ವಾಮಿ ಇದ್ದರು.