ತಿ.ನರಸೀಪುರ ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಮಾತನಾಡಿದರು. ಡಾ.ಕೆ.ರಂಗಸ್ವಾಮಿ, ಕೆ.ಡಿ.ವಿನೂತನ್, ಸಿ.ಶ್ರೀನಿವಾಸ್, ಕುಕ್ಕುರು ಪ್ರಸನ್ನ ಇದ್ದರು.
ತಿ.ನರಸೀಪುರ: ತಾಲೂಕು ಆಡಳಿತದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಿಷ್ಟಾಚಾರದನ್ವಯ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಮಾರ್ಗಸೂಚಿಯಂತೆ ಏ.4ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.
ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಆಚರಣೆಯ ಪೂರ್ವಭಾವಿ ಸಭೆಗೆ ನಿರಂತರವಾಗಿ ಗೈರು ಹಾಜರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಶಿಫಾರಸು ಮಾಡಲಾಗುವುದು. ಇರುವ ಕಾಲಮಿತಿಯಲ್ಲಿ ಬಾಬು ಜಗಜೀವನ್ ರಾಂ ಹಾಗೂ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಪ್ರತ್ಯೇಕವಾಗಿ ಆಯೋಜನೆಗೊಳ್ಳುವ ಕಾರ್ಯಕ್ರಮಗಳಿಗೆ ತಾಲೂಕು ಆಡಳಿತ ಅಗತ್ಯ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಹಿರಿಯ ಮುಖಂಡ ಮೂಗೂರು ಸಿದ್ದರಾಜು, ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್, ಯುವ ಮುಖಂಡ ಸೋಸಲೆ ಎ.ಶಿವಕುಮಾರ್ ಮಾತನಾಡಿದರು.
ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ಧಾರ್ಥ, ಕುಕ್ಕೂರು ಗಣೇಶ್, ಕೆ.ಎನ್.ಪ್ರಭುಸ್ವಾಮಿ, ತುಂಬಲ ಮಂಜುನಾಥ್, ಕುಕ್ಕುರು ರಾಜು, ಸಿ.ಪುಟ್ಟಯ್ಯ, ವಾಟಾಳು ಪುಟ್ಟಸ್ವಾಮಿ, ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ ರಂಗಸ್ವಾಮಿ, ಸಮಾಜ ಕಲ್ಯಾಣಾಧಿಕಾರಿ ಕೆ.ಡಿ.ವಿನೂತನ್, ಪುರಸಭೆ ಮುಖ್ಯಾಧಿಕಾರಿ ಸಿ.ಶ್ರೀನಿವಾಸ್, ಆರ್.ಅರ್ಜುನ್ ಇತರರು ಇದ್ದರು.