ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಅಪರಿಚಿತ ವಾಹನ ಗುದ್ದಿ ಸ್ಥಳದಲ್ಲಿ ಮೃತಪಟ್ಟಿರುವ ಜಿಂಕೆ. 
ಮೈಸೂರು

ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆ ಸಾವು

ಶಿವಶಂಕರ್ ಎಂ. ಹೆಬ್ಬಳ್ಳ
ನಂಜನಗೂಡು: ತಾಲೂಕಿನ ನೇರಳೆ ಗೇಟ್ ಬಳಿ ಬುಧವಾರ ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದೆ.
ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ನೇರಳೆ ಗೇಟ್ ಬಳಿ ಜಿಂಕೆ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೇರಳೆ ಗೇಟ್‌ನಿಂದ ಬದನವಾಳು ಗ್ರಾಮದವರೆಗೆ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ನಡೆಯುತ್ತಿವೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸಲು ಕ್ರಮವಹಿಸುವುದಾಗಿ ವಲಯ ಅರಣ್ಯ ಅಧಿಕಾರಿ ನಿತಿನ್‌ಕುಮಾರ್ ತಿಳಿಸಿದ್ದಾರೆ.