ಸಾಲಿಗ್ರಾಮ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಉದಯ್ ಶಂಕರ್ ಸಭೆ ನಡೆಸಿದರು.ಇ ಒ ರವಿಕುಮಾರ್.ಸಿಡಿಪಿಒ ಅಣ್ಣಯ್ಯ ಸಾರಿಗೆ ಇಲಾಖೆ ಗುರು, ಚೆಸ್ಕಾಂ ಮಧುಸೂದನ್ ಇದ್ದರು. 
ಮೈಸೂರು

ಗ್ಯಾರಂಟಿ ಯೋಜನೆಯನ್ನು ಲಾನುಭವಿಗಳಿಗೆ ತಲುಪಿಸಿ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ್ ಶಂಕರ್ ಸೂಚನೆ
ಸಾಲಿಗ್ರಾಮ: ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಲಾನುಭವಿಗಳಿಗೆ ತಲುಪಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ್ ಶಂಕರ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸಾರ್ವಜನಿಕರು ಯಾವುದೇ ಯೋಜನೆಯ ಬಗ್ಗೆ ಅದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದರೆ ಅವರುಗಳಿಗೆ ಸ್ಪಷ್ಟವಾದ ಮಾಹಿತಿ ನೀಡಿ, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳು ಬರುವಂತಹ ಸಂದರ್ಭದಲ್ಲಿ ಕಳೆದ ಸಭೆಗಳಲ್ಲಿ ಬಂದಿರುವ ದೂರುಗಳು ಹಾಗೂ ಅದಕ್ಕೆ ಪರಿಹಾರ ಕಲ್ಪಿಸಿರುವ ಬಗ್ಗೆ
ಅಗತ್ಯ ದಾಖಲೆಗಳನ್ನು ತರುವ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹಾರ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದರು.'
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಹೆಬ್ಬೆಟ್ಟು (ಬಯೋಮೆಟ್ರಿಕ್) ಪಡೆಯುವ ದಿನದಂದೇ ಪಡಿತರ ವಿತರಿಸಲು ಅಗತ್ಯ ಕ್ರಮವಹಿಸಬೇಕು ಎಂದರು.
ಸಾಲಿಗ್ರಾಮ ಪಟ್ಟಣದಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿನ ಶೌಚಗೃಹ ಸ್ವಚ್ಛತೆ ಕಾಪಾಡಬೇಕು. ಪ್ರಮುಖ ರಸ್ತೆಗಳಲ್ಲಿ ಉತ್ತಮ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಹೇಳಿದರು.
ತಾಲೂಕಿನ ಹಲವೆಡೆ ವಿದ್ಯುತ್ ಸಮಸ್ಯೆಗಳು ಕಂಡುಬಂದರೂ ಕೂಡ ಸೆಸ್ಕ್ ಇಂಜಿನಿಯರ್‌ಗಳು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ತಾ.ಪಂ.ಇಒ ಎ.ಎನ್.ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ರಾದ ಮಹಾಲಿಂಗಪ್ಪ, ತಂದ್ರೆ ರಾಣಿ ಕುಮಾರ್, ಅನಿಲ್, ಮೋಹನ್, ಮೂರ್ತಿ, ರವೀಶ್, ಲೋಕೇಶ್, ವಾಸಿಮ್, ಮಹದೇವಪ್ಪ, ಸಿಡಿಪಿಒ ಅಣ್ಣಯ್ಯ, ಸೆಸ್ಕ್ ಎಇಇ ಮಧುಸೂದನ್ ಇತರರಿದ್ದರು.