ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.ಧರ್ಮಸೇನಾ, ಮರಿತಿಬ್ಬೇಗೌಡ, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಭಾಗವಹಿಸಿದ್ದರು. 
ಮೈಸೂರು

ಡಾ.ಬಿ.ಜೆ.ವಿಜಯ್ ಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯ

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮುಖಂಡರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು.
12 ವರ್ಷಗಳಿಂದ ಪಕ್ಷದ ಸಂಘಟನೆಯೊಂದಿಗೆ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಪಕ್ಷವನ್ನು ಕಟ್ಟುತ್ತಿರುವ ಕಟ್ಟಾಳು ಡಾ.ಬಿ.ಜೆ.ವಿಜಯ್ ಕುಮಾರ್ ಅವರಿಗೆ ಎಂಎಲ್‌ಸಿ ಸ್ಥಾನ ನೀಡದೇ ಇದ್ದರೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಕೆಟ್ಟ ಸಂದೇಶ ಹೋಗಲಿದೆ ಎಂಬ ಎಚ್ಚರಿಕೆ ಸಂದೇಶ ಕೂಡ ಬಂತು.
ನಗರದಲ್ಲಿ ಶನಿವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರು, ಕೆಪಿಸಿಸಿ ಸದಸ್ಯರು ಮತ್ತು ಮುಖಂಡರ ತುರ್ತು ಸಭೆಯಲ್ಲಿ ಭಾಗವಹಿಸಿದ್ದವರು ಈ ರೀತಿ ತಮ್ಮ ಅನಿಸಿಕೆ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪಕ್ಷದ ಹೈ ಕಮಾಂಡ್‌ಗೆ ಮನವಿ ಸಲ್ಲಿಸಲು ನಿರ್ಧರಿಸಿದರು.
ಯಾವುದೇ ಅಧಿಕಾರವಿಲ್ಲದೇ ಪಕ್ಷದ ಕೆಲಸವನ್ನೇ ನಿತ್ಯ ಕಾಯಕವನ್ನಾಗಿಸಿಕೊಂಡಿರುವ ವಿಜಯ್ ಕುಮಾರ್ ಅವರು ತಮ್ಮ ಜೀವನದ ಸುದೀರ್ಘ ಅವಧಿಯನ್ನು ಪಕ್ಷಕ್ಕಾಗಿ ಮುಡಿಪಾಗಿರಿಸಿ ದ್ದಾರೆ. ಪಕ್ಷವನ್ನೇ ಮನೆಯನ್ನಾಗಿಸಿಕೊಂಡು ಹಗಲಿರುಳು ಶ್ರಮಿಸಿದ್ದಾರೆ. ಪಕ್ಷಕ್ಕಾಗಿ ದುಡಿದ ಬಿಜೆವಿ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ಕೂಲಿ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.ಧರ್ಮಸೇನಾ, ಮರಿತಿಬ್ಬೇ ಗೌಡ, ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಯಲ್ಲಿನ ಪಕ್ಷದ ಮುಖಂಡರು ಭಾಗವಹಿಸಿದ್ದರು.