ಮೈಸೂರು ಕನ್ನಡ ವೇದಿಕೆ ವತಿಯಿಂದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಲಾಯಿತು. ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಪದಾಧಿಕಾರಿಗಳಾದ ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್‌ಐಸಿ, ಹೊನಕೆರೆ ಸ್ವಾಮಿ, ಗೋವಿಂದರಾಜು, ಗೋಪಿ ಇದ್ದರು. 
ಮೈಸೂರು

ನಾಗಮಲೆ ಮಾರ್ಗದಲ್ಲಿ ಚಿರತೆ ದಾಳಿ ತಡೆಗೆ ಆಗ್ರಹ

ಅವಿನಾಶ್ ಜೈನಹಳ್ಳಿ

ಪ್ರಮುಖ ಮುಖ್ಯಾಂಶಗಳು

  • ಮೈಸೂರು ಕನ್ನಡ ವೇದಿಕೆಯಿಂದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ
ಮಲೆ ಮಾದೇಶ್ವರ ಬೆಟ್ಟದ ನಾಗಮಲೆಗೆ ಭೇಟಿ ನೀಡುವ ಭಕ್ತರ ಮೇಲೆ ಚಿರತೆ ದಾಳಿ ನಡೆಯುತ್ತಿದ್ದು, ಭಕ್ತರಿಗೆ ಅರಣ್ಯ ಇಲಾಖೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅಗ್ರಹಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಲಾಯಿತು.
ಹಿಂದಿನಿಂದಲೂ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೆ ಅಸಂಖ್ಯಾತ ಭಕ್ತರು ಭೇಟಿ ನೀಡಿ, ಮಹದೇಶ್ವರ ದರ್ಶನ ಪಡೆಯುವ ಪ್ರತೀತಿ ಇದೆ. ಅಂದಿನಿಂದಲೂ ಯಾವುದೇ ಅಹಿತಕರ ಘಟನೆಗಳಾಗಲಿ, ವನ್ಯಜೀವಿ- ಮಾನವ ಸಂಘರ್ಷಗಳಾಗಲಿ ನಡೆದಿರಲಿಲ್ಲ. ಆದರೆ, ಇತ್ತೀಚೆಗೆ ವನ್ಯಜೀವಿಗಳು ಭಕ್ತರ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿವೆ. ಇದಕ್ಕೆಲ್ಲ ಅರಣ್ಯ ಇಲಾಖೆಯ ಬೇಜವಾಬ್ದಾರಿಯೇ ಕಾರಣ ಎಂದು ಆಕ್ರೋಶ ಹೊರಹಾಕಿದರು.
ವಿಪರ್ಯಾಸವೆಂದರೆ ಭಕ್ತರ ಮುಕ್ತ ಪ್ರವೇಶಕ್ಕೆ ಕಡಿವಾಣ ಹಾಕಿ, ನಾಗಮಲೆ ದರ್ಶನಕ್ಕೆ ಆನ್‌ಲೈನ್ ಮೂಲಕ 200 ರೂ. ಪ್ರವೇಶ ಶುಲ್ಕ ವಿಧಿಸಿ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ? ಭಕ್ತರಿಂದ ಶುಲ್ಕ ವಸೂಲಿ ಮಾಡುವ ಅರಣ್ಯ ಇಲಾಖೆ, ದಾರಿಯಲ್ಲಿ ವನ್ಯಜೀವಿಗಳ ಓಡಾಟದ ಕುರಿತು ನಾಮಫಲಕ ಹಾಕದೇ ಇರುವುದು ದುರಂತ ಎಂದು ಕಿಡಿಕಾರಿದರು.
ಇತ್ತೀಚೆಗೆ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಅಲ್ಲಿನ ಸಿಬ್ಬಂದಿ ಭದ್ರತೆ ಒದಗಿಸದಿರುವುದು ಅಧಿಕಾರಿಗಳ ಕರ್ತವ್ಯ ಲೋಪವಾಗಿದೆ. ಅರಣ್ಯ ಇಲಾಖೆಗೆ ಬೇಕಾಗಿರುವುದು ಹಣ ಮಾತ್ರ. ಜನರ ರಕ್ಷಣೆ ಅಲ್ಲ. ಚಿರತೆ ದಾಳಿಯಿಂದ ಮೃತಪಟ್ಟಿರುವ ಬಾಲಕನ ಸಾವಿಗೆ ಅರಣ್ಯ ಇಲಾಖೆಯೇ ನೇರ ಕಾರಣ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಪದಾಧಿಕಾರಿಗಳಾದ ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್‌ಐಸಿ, ಹೊನಕೆರೆ ಸ್ವಾಮಿ, ಗೋವಿಂದರಾಜು, ಗೋಪಿ ಇದ್ದರು.