ಸೋಮನಾಥಪುರ ಗಣೇಶ್ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗವನ್ನು ಮಾಡುವುದಿಲ್ಲ. ಅವರ ಆದಾಯ 40,000 ಎಂದು ನಮೂದಿಸುತ್ತಾರೆ. ಇದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಯಡದೊರೆ ನಿರಂಜನ್, ಕೂಡ್ಲೂರು ಶಿವನಂಜು ಇದ್ದರು. 
ಮೈಸೂರು

ಜಾತಿ ಪ್ರಮಾಣಪತ್ರ ಸಮಸ್ಯೆ ಬಗೆಹರಿಸಲು ಒತ್ತಾಯ

ಎಂ.ರವಿ
ತಿ.ನರಸೀಪುರ: ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದ್ದು ಕೂಡಲೇ ಸಮಸ್ಯೆ ಬಗೆಹರಿಸಿ ಸಮುದಾಯದ ಜನರಿಗೆ ಜಾತಿ ಪ್ರಮಾಣ ಪತ್ರ ವಿತರಣೆ ಮಾಡುವಂತೆ ವಿಚಾರವಾದಿ ಕೆ.ಎನ್.ಪ್ರಭುಸ್ವಾಮಿ ತಾಲೂಕು ಆಡಳಿತವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರ ಇತ್ತೀಚೆಗೆ ಒಳ ಮೀಸಲಾತಿ ಹಂಚಿಕೆ ಮಾಡಿ ಜಾರಿಗೊಳಿಸಿದ್ದು, ಮಾದಿಗ ಸಮಾಜಕ್ಕೆ ಎ ಪ್ರವರ್ಗ, ಹೊಲಯ ಸಮಾಜಕ್ಕೆ ಪ್ರವರ್ಗ ಬಿ ಎಂದು ನಮೂದಿಸಿ ಪ್ರಮಾಣ ಪತ್ರ ನೀಡಲು ಸೂಚಿಸಿದೆ. ಆದರೆ ತಾಲೂಕಿನಲ್ಲಿ ಪ್ರಮಾಣ ಪತ್ರ ನೀಡಲು ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ವಿನಾ ಕಾರಣ ತೊಂದರೆ ನೀಡುತ್ತಿದ್ದಾರೆ. ಜತೆಗೆ ನೆರೆಹೊರೆಯವರ 5 ಆಧಾರ್ ಕಾರ್ಡ್ ನೀಡುವಂತೆ ಹೇಳುತ್ತಿದ್ದಾರೆ. ಬೇರೆ ತಾಲೂಕುಗಳಲ್ಲಿ ಈ ಸಮಸ್ಯೆ ಇಲ್ಲ. ಆದರೆ ಈ ತಾಲೂಕಿನಲ್ಲಿ ಮಾತ್ರ ಸಾಕಷ್ಟು ಸಮಸ್ಯೆ ಇದೆ ಎಂದರು.
ನೆಮ್ಮದಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಹೋದರೆ ಅಲ್ಲಿ ಸರ್ವರ್ ಸಮಸ್ಯೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಪ್ರಸ್ತುತ ವಿದ್ಯಾರ್ಥಿಗಳ ಪ್ರವೇಶಾತಿ ನಡೆಯುತ್ತಿದೆ. ಕೂಡಲೇ ಸಂಬಂಧಿಸಿದ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿ ಜಾತಿ ಪ್ರಮಾಣ ವಿತರಣೆಗೆ ಅಗತ್ಯ ಕ್ರಮ ವಹಿಸುವಂತೆ ಅವರು ತಹಸೀಲ್ದಾರ್ ಅವರನ್ನು ಒತ್ತಾಯಿಸಿದರು.
ಮುಖಂಡ ಮೂಗೂರು ಸಿದ್ದರಾಜು ಮಾತನಾಡಿ, ಜಾತಿ ಪ್ರಮಾಣಪತ್ರ ನೀಡುವಲ್ಲಿ ವಿಳಂಬವಾದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ. ತಾಲೂಕು ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಕಲ್ಪಿಸಲು ಹಾಗೂ ಸಮುದಾಯದವರಿಗೆ ಇತರ ಉದ್ದೇಶಗಳಿಗೆ ಅಗತ್ಯ ಇರುವ ಜಾತಿ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಿದವರಿಗೆ ಕೂಡಲೇ ವಿತರಿಸಲು ಕ್ರಮ ವಹಿಸುವಂತೆ ಆಗ್ರಹಿಸಿದರು.
ಸೋಸಲೆ ಶಿವಕುಮಾರ್ ಮಾತನಾಡಿ, ತಹಸೀಲ್ದಾರ್ ಅವರು ನಾಡಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅರಿತು ರೆವಿನ್ಯು ಇನ್‌ಸ್ಪೆಕ್ಟರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಬೇಕು ಎಂದು ಹೇಳಿದರು.