ಕೆ.ಆರ್.ನಗರದ ಡಾ.ರಾಜ್‌ಕುಮಾರ್ ಬಾನಾಂಗಳದಲ್ಲಿ ಪ್ರಕಾಶಮಯ ರುದ್ರಾಕ್ಷಿಗಳಿಂದ ನಿರ್ಮಿಸಲಾಗಿರುವ ಬೃಹತ್ ಶಿವಲಿಂಗ. 
ಮೈಸೂರು

ಈಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತಗಣ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • Devotees
ಕೆ.ಆರ್.ನಗರ: ಮಹಾಶಿವರಾತ್ರಿ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಭಾನುವಾರ ವಿಶೇಷ ಪೂಜಾ ಕೈಂಕರ್ಯಗಳು ಸಂಭ್ರಮದಿಂದ ಜರುಗಿದವು.
ಪಟ್ಟಣದ ಹೊರ ವಲಯದಲ್ಲಿರುವ ಶ್ರೀಮೀನಾಕ್ಷಿ ಸಮೇತ ಶ್ರೀಅರ್ಕೇಶ್ವರ ಸ್ವಾಮಿ ದೇವಾಲಯ, ಪಟ್ಟಣದ ಬಸವೇಶ್ವರ ಬಡಾವಣೆಯ ಶ್ರೀಮಲೆ ಮಹದೇಶ್ವರ ಸ್ವಾಮಿ ದೇವಾಲಯ, ಶ್ರೀಚಂದ್ರಮೌಳೀಶ್ವರ ದೇವಾಲಯ, ಮಧುವನಹಳ್ಳಿ ಬಡಾವಣೆಯ ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ ಸೇರಿದಂತೆ ಇತರ ದೇವಸ್ಥಾನಗಳಿಗೆ ಬೆಳಗ್ಗೆಯಿಂದಲೆ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಅರ್ಕೇಶ್ವರ ಸ್ವಾಮಿ ದೇವಾಲಯಕ್ಕೆ ಬಂದ ಭಕ್ತರು ಕಾವೇರಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದರು. ಪಟ್ಟಣದ ಶ್ರೀಮಲೆ ಮಹದೇಶ್ವರ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಬೃಹತ್ ಶಿವಲಿಂಗ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಶಾಖಾ ಕಚೇರಿಯ ವತಿಯಿಂದ ಶಿವ ಜಯಂತಿ ಮಹೋತ್ಸವದ ಹಾಗೂ ಮಹಾ ಶಿವರಾತ್ರಿಯ ಅಂಗವಾಗಿ ಎಂಟು ದಿನಗಳ ಕಾಲ ದ್ವಾದಶ ಜ್ಯೋತಿಲಿರ್ಂಗಗಳ ಪುಣ್ಯ ದರ್ಶನ ಮತ್ತು ಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಪಟ್ಟಣದ ಡಾ.ರಾಜ್‌ಕುಮಾರ್ ಬಾನಂಗಳದಲ್ಲಿ ಪ್ರಾರಂಭವಾಗಿರುವ ಪ್ರಕಾಶಮಯ ರುದ್ರಾಕ್ಷಿಗಳಿಂದ ನಿರ್ಮಿಸಲಾಗಿರುವ ಬೃಹತ್ ಶಿವಲಿಂಗ ದರ್ಶನ ಏರ್ಪಡಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಭಕ್ತರು ದರ್ಶನ ಪಡೆಯಬಹುದಾಗಿದೆ.