ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಶಾಸಕ ಅನಿಲ್ ಚಿಕ್ಕಮಾದು ಅವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದರು.
ಎಚ್.ಡಿ. ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಶಾಸಕ ಅನಿಲ್ ಚಿಕ್ಕಮಾದು ಅವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದರು.
ನಂತರ ಮಾತನಾಡಿದ ಅವರು, 1-19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣಾ ದಿನದ ಅಂಗವಾಗಿ ಜಂತುಹುಳು ಮಾತ್ರೆಯನ್ನು ನೀಡಲಾಗುತ್ತಿದೆ. ತಾಲೂಕಿನ ಅಂಗನವಾಡಿ ಮತ್ತು ಶಾಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸುವಂತೆ ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ರಾಜ್ಯಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಚ್.ಡಿ.ಕೋಟೆ ತಾಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21 735 ಮಕ್ಕಳಿದ್ದಾರೆ. ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ. ಫೆ.16ರಂದು ಮಾಪಾ ಆಫ್ ಡೇ ಎಂದು ಜಂತುಹುಳು ಮಾತ್ರೆ ನೀಡುತ್ತೇವೆ ಎಂದರು.
ಮುಖಂಡರಾದ ಪ್ರದೀಪ್ ಕುಮಾರ್, ಮಹೇಶ್, ಗ್ರಾಮದ ಮುಖಂಡರಾದ ಮಂಚ್ಚಯ್ಯ, ದಿನೇಶ್, ವೈದ್ಯಾಧಿಕಾರಿ ಡಾ.ಚಂದ್ರಕಲಾ, ಸಿಬ್ಬಂದಿ ರವಿರಾಜ್, ದೊರೆ, ಜಯಂತಿ, ಶಶಿಕಲಾ ಇದ್ದರು.