ಕೆ.ಆರ್.ನಗರದ ತಾಪಂ ಕಚೇರಿ ಆವರಣದಲ್ಲಿ ಶಾಸಕ ಡಿ.ರವಿಶಂಕರ್ ಅವರು ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದರು. ವಿ.ಪಿ.ಕುಲದೀಪ್, ಎ.ಎನ್.ರವಿ, ಎಲ್.ಎಂ.ಸಣ್ಣಪ್ಪ, ಕೆ.ಬಿ.ನಟರಾಜು, ಕಾಟ್ನಾಳು ಎಲ್.ಹೇಮಂತ್‌ಕುಮಾರ್ ಮತ್ತಿತರರು ಇದ್ದರು.
ಕೆ.ಆರ್.ನಗರ: ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರಿ ನೌಕರರ ಕರ್ತವ್ಯ. ಅದನ್ನು ಎಲ್ಲ ನೌಕರರು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ 20 ಮಂದಿ ಅಂಗವಿಕರಿಗೆ ತ್ರಿಚಕ್ರ ವಾಹನ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅಂಗವಿಕಲರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೈತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರ್ಕಾರ ತ್ರಿಚಕ್ರ ವಾಹನ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಉತ್ತಮವಾಗಿ ಬದುಕು ಸಾಗಿಸಿ ಎಂದರು.
ಫಲಾನುಭವಿಗಳು ಸರ್ಕಾರದ ಸವಲತ್ತುಗಳನ್ನು ಅನ್ಯರಿಗೆ ನೀಡದೆ ಸದುಪಯೋಗ ಪಡಿಸಿಕೊಂಡು ಯೋಜನೆಗಳ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.
ತಾಪಂ ಇಒಗಳಾದ ವಿ.ಪಿ.ಕುಲದೀಪ್, ಎ.ಎನ್.ರವಿ, ತಾಪಂ ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಬಿ.ನಟರಾಜು, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ತಾಲೂಕು ಸಂಯೋಜಕ ಕಾಟ್ನಾಳು ಎಲ್.ಹೇಮಂತ್‌ಕುಮಾರ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಎನ್.ರಂಗಸ್ವಾಮಿ, ಕಾಂಗ್ರೆಸ್ ಮುಖಂಡರಾದ ಹುಚ್ಚೇಗೌಡ, ವಿ.ಸುರೇಶ್, ಎನ್.ಎಂ.ಶಂಕರಪ್ಪ, ತಿಮ್ಮಶೆಟ್ಟಿ ಇದ್ದರು.