ಬೆಟ್ಟದಪುರ ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿರೀಕ್ಷಣಾಧಿಕಾರಿ ಎಚ್.ಎಸ್ ರವಿ ಮಾತನಾಡಿದರು. ಚೈತ್ರಾ, ಓಂಕಾರಮೂರ್ತಿ, ಉಷಾ ಇತರರಿದ್ದರು.  
ಮೈಸೂರು

ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ

ಪ್ರಜ್ವಲ್.ಎನ್

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್ ರವಿ ಹೇಳಿಕೆ
ಬೆಟ್ಟದಪುರ: ಜ್ವರ ಬಂದಾಗ ನಿರ್ಲಕ್ಷ್ಯ ಮಾಡದೇ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡು, ಸೂಕ್ತ ಸಲಹೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್ ರವಿ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಕೇಂದ್ರದಿಂದ ಗುರುವಾರ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಲೇರಿಯ ಅನಾಫಿಲೀಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ ಸೊಳ್ಳೆಯ ಕಡಿತದಿಂದ ಮಲೇರಿಯ ರೋಗಗಳು ಹರಡುತ್ತವೆ ಎಂದು ತಿಳಿಸಿದರು.
ಚಳಿ, ಜ್ವರ, ನಡುಕ ಇವೆಲ್ಲ ಮಲೇರಿಯದ ಲಕ್ಷಣವಾಗಿದ್ದು, ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇದೆ. ರೋಗವನ್ನು ತಡೆಗಟ್ಟಲು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಯಾವುದೇ ನೀರಾದರೂ ಅದನ್ನ ಸುರಕ್ಷಿತವಾಗಿ ಮುಚ್ಚಿಡಬೇಕು ವಾರಕ್ಕೆ ಎರಡು ಬಾರಿ ಎಲ್ಲ ನೀರಿನ ಸಂಗ್ರಹಗಳನ್ನು ತೊಳೆದು, ಒಣಗಿಸಿ, ನೀರು ತುಂಬಿಸಿ ಮುಚ್ಚಿಡಬೇಕು ಹಾಗೂ ಘನತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ, ತೆಂಗಿನ ಚಿಪ್ಪು, ಟೈಯರ್ ಇತ್ಯಾದಿ ನೀರು ಸಂಗ್ರಹಗಳನ್ನು ತೆರವುಗೊಳಿಸಬೇಕು ಎಂದು ಸಲಹೆ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಚೈತ್ರಾ, ಶಿಕ್ಷಕರಾದ ಓಂಕಾರಮೂರ್ತಿ, ಉಷಾ, ವಿದ್ಯಾರ್ಥಿಗಳು ಇದ್ದರು.