ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ 
ಮೈಸೂರು

ಡಾ.ಎಚ್.ಸಿ. ಮಹದೇವಪ್ಪಗೆ ಸಚಿವ ಸ್ಥಾನಕ್ಕೆ ಒತ್ತಾಯ : ಬೆಂಗಳೂರಿನಲ್ಲಿ ಜೂ.11 ರಂದು ಪ್ರತಿಭಟನೆ

ಮೈಸೂರು: ಹಿರಿಯ ದಲಿತ ರಾಜಕಾರಣಿಗಳನ್ನು ಕಾಂಗ್ರೆಸ್ ನಿರಂತರವಾಗಿ ಕಡೆಗಣಿಸುತ್ತಿರುವುದನ್ನು ಖಂಡಿಸಿ ಜೂ.11 ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಸುಸೂತ್ರವಾಗಿ ನಡೆಯಲಿದೆ. ಆದರೆ, ಇದೇ ವೇಳೆ ದಲಿತ ನಾಯಕರನ್ನು ಕಾಂಗ್ರೆಸ್ ಗೌರವಯುತವಾಗಿ ನಡೆಸಿಕೊಳ್ಳಬೇಕು. ನಾವೆಲ್ಲ ಯಾವುದೇ ಪಕ್ಷದಲ್ಲಿದ್ದರೂ ಪ್ರಜಾಪ್ರಭುತ್ವ, ಅಸಮಾನತೆ, ದಲಿತರಿಗೆ ಅನ್ಯಾಯದ ವಿಷಯದ ಪ್ರಶ್ನೆ ಎದುರಾದಾಗ ಒಗ್ಗೂಡುತ್ತೇವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಳೇ ಮೈಸೂರು ಭಾಗಕ್ಕೆ ಒರ್ವ ದಲಿತರನ್ನು ಸಚಿವರನ್ನಾಗಿ ಮಾಡಬೇಕು. ಈ ಭಾಗದ ಪ್ರಮುಖ ನಾಯಕರಾದ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ, ಅವರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಅಶೋಕಪುರಂ ದಲಿತ ಸಂಘಟನೆಯ ಪದಾಧಿಕಾರಿಗಳಾದ ಮಹೇಶ್, ನಾಗರಾಜ್, ರಮೇಶ್, ಪುಟ್ಟರಾಜು, ಮಂಜು ಇದ್ದರು.