ಸರಗೂರು ತಾಲೂಕಿನ ಮುಳ್ಳೂರು ಗ್ರಾಮದ ರೈತ ರಾಜೇಶ್ ಎಂಬುವರ ಜಮೀನಲ್ಲಿ ಬೆಳದ ಕಾಡಾನೆಗಳ ಹಿಂಡು ನಾಶ ಮಾಡಿವೆ.
ಗ್ರಾಮದ ರೈತ ರಾಜೇಶ್ ಅವರಿಗೆ ಸೇರಿದ ಬಾಳೆ ತೋಟ ನಾಶವಾಗಿದೆ. ಸುಮಾರು 2 ಎಕರೆ ಜಮೀನಿನಲ್ಲಿ 2 ಸಾವಿರ ಬಾಳೆ ಬೆಳೆದಿದ್ದರು. ಕಾಡಾನೆಗಳ ದಾಳಿಗೆ ಸುಮಾರು 1000 ಬಾಳೆ ಗಿಡಗಳು ನಾಶವಾಗಿದ್ದು, ₹ 7 ಲಕ್ಷ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಒಂದು ಬಾಳೆ ಸಸಿಗೆ ₹ 25 ಕೊಟ್ಟು ನರ್ಸರಿಯಿಂದ ತಂದು ಬೇಸಾಯ ಮಾಡಲಾಗಿದೆ. ಒಂದು ಗಿಡ ಬಾಳೆ ಬೆಳೆಯಲು ಸುಮಾರು ₹ 400 ಖರ್ಚಾಗಿದ್ದು, ಉತ್ತಮ ಫಸಲು ಬಂದಿದ್ದರಿಂದ ಒಂದು ಗೊನೆಗೆ ₹ 1000 ಸಿಗುತ್ತಿತ್ತು. ಒಂದು ತಿಂಗಳ ಹಿಂದೆ ಇದೇ ಬಾಳೆ ತೊಟಕ್ಕೆ ಆನೆಗಳು ನುಗ್ಗಿ ಸ್ವಲ್ಪ ಬೆಳೆಯನ್ನು ನಾಶ ಮಾಡಿದ್ದವು. ಮುಂದೆಯೂ ಆನೆಗಳು ದಾಳಿ ಇಡುವ ಸಾಧ್ಯತೆಯಿದೆ ಎಂದು ನೋವು ತೋಡಿಕೊಂಡರು.
ಕಾಡಾನೆಗಳಿಂದ ಬಾಳೆ ನಾಶವಾಗಿರುವ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಒಂದು ಗಿಡಕ್ಕೆ ₹ 100 ರಂತೆ ಪರಿಹಾರ ಸಿಗಲಿದೆ.ಇವರು ಕೊಡುವ ಹಣದಿಂದ ಬಾಳೆ ಗಿಡಗಳು ಬರುವುದಿಲ್ಲ.ಅರ್ಜಿ ಹಾಕಿ ಪರಿಹಾರ ಪಡೆಯಬೇಕಾದರೆ ನಮಗೆ ಸಾವಿರಕ್ಕೂ ಹೆಚ್ಚು ಖರ್ಚಾಗುತ್ತದೆ. ಮತ್ತೆ ನಮಗೇನು ಸಿಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಸುಮಾರು ಮಂದಿ ಬೆಂಗಳೂರಿನಿಂದ ವಾಪಸ್ ಹಳ್ಳಿಗೆ ಬಂದು ವ್ಯವಸಾಯ ಮಾಡುತ್ತಿದ್ದಾರೆ. ರಾಜೇಶ್ ಯುವ ರೈತನಾಗಿದ್ದು, ಪ್ರಗತಿಪರ ರೈತನಾಗಬೇಕೆಂದು ಬಾಳೆ ಬೇಸಾಯ ಮಾಡಿದ್ದಾರೆ. ಕಾಡಾನೆಗಳು ಅವರು ಬೆಳೆದ ಬೆಳೆಯನ್ನು ನಾಶ ಮಾಡಿವೆ. ಅರಣ್ಯ ಇಲಾಖೆಯವರು ಇಲ್ಲಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕಾಡಾನೆಗಳನ್ನು ಕಾವಲು ಮಾಡರದೆವುದರಿಂದ ಕಾಡಂಚಿನ ಭಾಗದಲ್ಲಿರುವ ರೈತರ ಜಮೀನಲ್ಲಿ ಬೆಳದ ಬೆಳೆಯನ್ನು ನಾಶ ಮಾಡಿವೆ.ಅರಣ್ಯ ಇಲಾಖೆಯಿಂದ ನಿರ್ಲಕ್ಷ್ಯದಿಂದಲೇ ನಮ್ಮ ಬೆಳೆ ನಾಶವಾಗಿವೆ.ಇವರು ಕಾಡಾನೆಗಳನ್ನು ಕಾಡಿನಿಂದ ಜಮೀನು ಕಡೆಗೆ ಬರುವ ಆನೆಗಳನ್ನು ತಡದೆ ಇವರು ಮನೆಯಲ್ಲಿ ಇರುವುದರಿಂದ ಇಂತ ಕೆಲಸ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.