ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರು ಗಿಡವನ್ನು ನೆಟ್ಟು ನೀರೆರೆದರು. ಎಂ.ಕೆ. ಸವಿತಾ ಹೇಳಿದರು. ಕೆ.ಎಸ್. ಸುಂದರರಾಜ್, ಅಂಶಿ ಪ್ರಸನ್ನ ಕುಮಾರ್, ಪ್ರೊ.ವಿ.ಷಣ್ಮುಗಂ, ಪ್ರೊ.ಕೆ. ತಿಮ್ಮಯ್ಯ ಹಾಗೂ ಇತರರು ಇದ್ದರು. 
ಮೈಸೂರು

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪರಿಸರ ದಿನ ಆಚರಣೆ

ಮೈಸೂರು: ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಕಾಳಜಿ ಮುಖ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ ಹೇಳಿದರು.
ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಹಾಗೂ ನವ ವಿಶ್ವಮಾನವ ಟ್ರಸ್ಟ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಾರಾಜ ಕಾಲೇಜು ಆವರಣದಲ್ಲಿ ಶುಕ್ರವಾರ ಸಸಿನೆಟ್ಟು ಮಾತನಾಡಿ, ಎಷ್ಟು ಗಿಡನೆಟ್ಟವು ಎಂಬುದು ಮುಖ್ಯವಾಗು ವುದಿಲ್ಲ. ನೆಟ್ಟ ಗಿಡಗಳ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದರು.
ಮರ-ಗಿಡಗಳನ್ನು ಬೆಳೆಸುವುದರಿಂದ ಅವು ಮನುಷ್ಯರ ಉಸಿರಾಟಕ್ಕೆ ಬೇಕಾದ ಆಮ್ಲಜನಕವನ್ನು ಒದಗಸುತ್ತವೆ. ಹೀಗಾಗಿ ಎಲ್ಲರೂ ಪರಿಸರಕ್ಕೆ ಪೂರಕವಾದ ಕ್ರಮಗಳನ್ನು ಅನುಸರಿಸಬೇಕು ಎಂದರು.
ಡಿಸಿಪಿ ಕೆ.ಎಸ್. ಸುಂದರರಾಜ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಪ್ರಾಂಶುಪಾಲ ಪ್ರೊ.ವಿ. ಷಣ್ಮುಗಂ, ಮೈಸೂರು ವಿಶ್ವವಿದ್ಯಾಲಯದ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ. ತಿಮ್ಮಯ್ಯ, ಮಹಾರಾಜ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಗೋವಿಂದರಾಜು, ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ, ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ. ನಿಂಗರಾಜ್ ಗೌಡ, ಎಂಎಂಟಿಟಿಸಿ ನಿರ್ದೇಶಕಿ ಪ್ರೊ.ಎಚ್.ಪಿ. ಜ್ಯೋತಿ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ.ಕೆ. ಮಂಟೇಲಿಂಗು, ತೋಟಗಾರಿಕೆ ವಿಭಾಗದ ಉಪ ನಿರ್ದೇಶಕ ಎನ್. ಚಲುವೇಶ್ ಹಾಗೂ ಇತರರು ಇದ್ದರು.