ಮೂಗೂರಿನ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಮಕ್ಕಳು ಕುತೂಹಲದಿಂದ ವೀಕ್ಷಿಸುತ್ತಿರುವುದು.
ಮೂಗೂರು: ಇಲ್ಲಿನ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಎನ್‌ಎಸ್‌ಕ್ಯೂಎಫ್ ಘಟಕ, ಮಾಹಿತಿ ತಂತ್ರಜ್ಞಾನ ವಿಭಾಗ ಹಾಗೂ ವಿಜ್ಞಾನ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕೆಪಿಎಸ್ ಶಾಲೆ ಪ್ರಾಂಶುಪಾಲರಾದ ಎಂ.ರಾಚಯ್ಯ ಉದ್ಘಾಟಿಸಿದರು.
ಪ್ರೌಢಶಾಲೆ ಮತ್ತು ಕಾಲೇಜು ಮಕ್ಕಳ ವಸ್ತು ಪ್ರದರ್ಶನ ವೀಕ್ಷಿಸಿ ಮಕ್ಕಳಿಂದ ಅತ್ಯಮೂಲ್ಯವಾದ ವಿಚಾರವನ್ನು ಪಡೆದುಕೊಂಡರು. ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಿಯಾ ಅವರ ಮಾರ್ಗದರ್ಶನದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಅಗತ್ಯ ಮಾಹಿತಿಯನ್ನು ವಸ್ತು ಪ್ರದರ್ಶನದಲ್ಲಿ ಮಕ್ಕಳು ಸಾದರಪಡಿಸಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಂ.ರಂಗಸ್ವಾಮಿ, ಕಾಲೇಜಿನ ಹಿರಿಯ ಉಪನ್ಯಾಸಕ ಪುಟ್ಟರಸ, ಶಿಕ್ಷಕರಾದ ಕೇಶವ್, ರಂಗಯ್ಯ, ಮಹದೇವು, ವನಜ, ಅನು, ಶಿಲ್ಪಾ, ವಿನುತಾ, ಮಧುಕುಮಾರ್, ರೋಹಿತ್, ಚಂದ್ರಪ್ರಭ, ನಿರ್ಮಲಾ ಇತರರಿದ್ದರು.