- ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದ ಅಭಿಮಾನಿಗಳು
- ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ
ಮೈಸೂರು: ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಭೇಟಿ ನೀಡಿ, ದೇವರ ದರ್ಶನ ಪಡೆದರು.
ನೆಚ್ಚಿನ ನಟ ಬರುತ್ತಿದ್ದಾರೆ ಎಂಬ ಸುದ್ದಿ ತಿಳಿದು ಅವರ ಅಭಿಮಾನಿಗಳು, ದೇವಸ್ಥಾನದ ಮುಂಭಾಗ ಜಮಾಯಿಸಿದ್ದರು. ಸುದೀಪ್ ಹಾಗೂ ಅವರ ಜತೆಯಲ್ಲಿದ್ದವರನ್ನು ದೇಗುಲದ ಒಳಗೆ ಹೋಗಲು ಪೊಲೀಸರು ಅನುವು ಮಾಡಿಕೊಟ್ಟರು. ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ದೇವಸ್ಥಾನದಿಂದ ಹೊರಗೆ ಹೋಗುವವರೆಗೂ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಬಿಗ್‌ಬಾಸ್ ಮುಗಿದ ನಂತರ ಬಿಡುವಿನಲ್ಲಿರುವ ಸುದೀಪ್ ಚಾಮುಂಡೇಶ್ವರಿ ದರ್ಶನ ಪಡೆದು ತೆರಳಿದರು. ಚಿತ್ರರಂಗಕ್ಕೆ ಬಂದು 30 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ.