ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ. 
ಮೈಸೂರು

ಚೆಲುವಾಂಬ ಮಕ್ಕಳ ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ

ಪ್ರಮುಖ ಮುಖ್ಯಾಂಶಗಳು

  • ಶೆಡ್‌ನಲ್ಲಿದ್ದ ಹಾಸಿಗೆಗಳಿಗೆ ಬೆಂಕಿ
  • ತಪ್ಪಿದ ಅನಾಹುತ
  • ಸುಮಾರು 20 ಹಾಸಿಗೆಗಳು ಭಸ್ಮ
ಮೈಸೂರು: ನಗರದ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ಚೆಲುವಾಂಬ ಮಕ್ಕಳ ಆಸ್ಪತ್ರೆ ಆವರಣದ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭಿವಿಸಿಲ್ಲ.
ಕೆ.ಆರ್.ಆಸ್ಪತ್ರೆಯ ಹಳೆಯ ಕಟ್ಟಡಗಳ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಚೆಲುವಾಂಬ ಆಸ್ಪತ್ರೆಯಲ್ಲಿದ್ದ ಹಾಸಿಗೆಗಳನ್ನು ಶೆಡ್‌ವೊಂದರಲ್ಲಿ ಸಂಗ್ರಹಿಸಲಾಗಿತ್ತು.
ಕಾಮಗಾರಿ ವೇಳೆ ವೆಲ್ಡಿಂಗ್ ಕಿಡಿಯಿಂದಾಗಿ ಶೆಡ್‌ನಲ್ಲಿದ್ದ ಹಾಸಿಗೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಪಾರ ಪ್ರಮಾಣದ ಹೊಗೆ ತುಂಬಿಕೊಂಡಿದ್ದರಿಂದ ಕೆಲಕಾಲ ಆತಂಕ ಉಂಟು ಮಾಡಿತ್ತು.
ಸುಮಾರು 20 ಹಾಸಿಗೆಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.