prostitution 
ಮೈಸೂರು

ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆಗೆ ತಳ್ಳುತಿದ್ದ ನಾಲ್ವರಿಗೆ ಜೈಲು ಶಿಕ್ಷೆ

ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ನಾಲ್ವರಿಗೆ ಮೈಸೂರಿನ ಏಳನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಕಠಿಣ ಶಿಕ್ಷೆಯೊಂದಿಗೆ 1 ಸಾವಿರ ರೂ. ದಂಡ ವಿಧಿಸಿದೆ.
ಮೈಸೂರಿನ ಶಾಂತವೇರಿ ಗೋಪಾಲ ಗೌಡ ನಗರದ ನಿವಾಸಿಗಳಾದ ಅಶೋಕ, ದಸ್ತಗೀರ್, ಚೇತನ್ ಮತ್ತು ಸತೀಶ್ ಶಿಕ್ಷೆಗೆ ಗುರಿಯಾದವರು.
ಈ ನಾಲ್ವರು ಹೆಣ್ಣು ಮಕ್ಕಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಬರುತ್ತಿದ್ದು, ಮನೆಯಲ್ಲಿ ಬಲವಂತವಾಗಿ ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ರಮೇಶ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದ್ದಾರೆ.