- ರೋಟರಿ ಶಾಲೆಯ ಆವರಣ
- ಉಚಿತ ಕಣ್ಣಿನ ತಪಾಸಣಾ ಶಿಬಿರ
ಬನ್ನೂರು: ಪಟ್ಟಣದ ಬಸ್ ನಿಲ್ದಾಣದ ಸಮೀಪವಿರುವ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆ , ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ , ಲಯನ್ಸ್ ಕಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನ.8ರ ಎರಡನೇ ಶನಿವಾರ, ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸಮಸ್ಯೆ ಇದ್ದವರು ಸದುಪಯೋಗ ಪಡೆದುಕೊಳ್ಳುವಂತೆ ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದ್ದಾರೆ.
ತಪಾಸಣೆಗೆ ಬರುವವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಮೊಬೈಲ್ ನಂಬರ್ ತರುವಂತೆ ತಿಳಿಸಲಾಗಿದೆ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆಗಣ್ಣು, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲಾಗುವುದು. ಕಣ್ಣಿನ ಪೊರೆ ಇರುವವರನ್ನು ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರ ಚಿಕಿತ್ಸೆ ಮಾಡಿಸಿ ಮತ್ತೆ ಸ್ವಸ್ಥಳಕ್ಕೆ ತಂದು ಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.