ಬೆಟ್ಟದಪುರ ಸಮೀಪದ ಕೊಣಸೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಮಂದಿರಲ್ಲಿ ಮಧುಮೇಹ ಹಾಗೂ ಆರೋಗ್ಯ ತಪಾಸಣೆ ಉಚಿತ ಶಿಬಿರ ಆಯೋಜಿಸಲಾಗಿತ್ತು. 
ಮೈಸೂರು

ಆಹಾರ ಪದ್ಧತಿ ಬದಲಾವಣೆ ಅಗತ್ಯ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಕೊಣಸೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಮಂದಿರಲ್ಲಿ ಮಂಗಳವಾರ ಮಧುಮೇಹ ಉಚಿತ ತಪಾಸಣೆ ಮತ್ತು ನಿಯಂತ್ರಣ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಮಂದಿರದ ವೈದ್ಯಾಧಿಕಾರಿ ಡಾ.ದಿನೇಶ್ ಕುಮಾರ್ ಮಾತನಾಡಿ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕಿದೆ. ಇವುಗಳು ದೇಹಕ್ಕೆ ಅಗತ್ಯವಾದ ವಿಟಮಿನ್‌ಗಳು, ಖನಿಜಗಳು, ಪ್ರೋಟೀನ್, ಕಾರ್ಬೋಹೈಡ್ರೇಟ್ ಮತ್ತು ಆರೋಗ್ಯಕರ ಕೊಬ್ಬನ್ನು ಸಮರ್ಪಕವಾಗಿ ಒದಗಿಸುತ್ತವೆ. ಹಸಿರು ತರಕಾರಿಗಳು, ಹಣ್ಣುಗಳು, ಧಾನ್ಯಗಳು, ಸಮತೋಲಿತ ಆಹಾರ ಕ್ರಮವು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಅತ್ಯಗತ್ಯವಾಗಿವೆ ಎಂದರು.
ಯೋಗ ತರಬೇತುದಾರರಾದ ಆಶಾ ಮಹದೇವರಾವ್ ಮಾತನಾಡಿ, ಪ್ರತಿಯೊಬ್ಬರೂ ಯೋಗ ಅಭ್ಯಾಸ ರೂಢಿಸಿಕೊಳ್ಳಬೇಕು. ಒತ್ತಡ ಜೀವನದಲ್ಲಿ ನಿತ್ಯ ಯೋಗವನ್ನು ಅಭ್ಯಾಸ ಮಾಡುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮವಾಗಿರಲು ಸಾಧ್ಯವಾಗಿದೆ ಎಂದು ಹೇಳಿದರು.
ಸಮುದಾಯ ಆರೋಗ್ಯ ಅಧಿಕಾರಿ ಪುನೀತ್, ಸಿಬ್ಬಂದಿ ರವಿಶಂಕರ್, ಮಂಜುನಾಥ್, ಮುಖಂಡರಾದ ಶಂಕರಪ್ಪ, ಮೂರ್ತಿ, ರವಿ, ಕಾಳಯ್ಯ ಇತರರು ಇದ್ದರು.