ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ಹರೀಶ್‌ಗೌಡ, ಡಾ.ತಿಮ್ಮಯ್ಯ, ರಾಮಪ್ಪ, ಕೆ.ರಂಗಸ್ವಾಮಿ, ಮರಿಸ್ವಾಮಿ ಇತರರಿದ್ದರು. 
ಮೈಸೂರು

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಬದ್ಧ

ಅವಿನಾಶ್ ಜೈನಹಳ್ಳಿ

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ
ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ನಗರದ ಬಾಬು ಜಗಜೀವನ ರಾಂ ಸಭಾಂಗಣದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಭಾನುವಾರ ಆಯೋಜಿಸಿದ್ದ ಭೋವಿ ಜನಾಂಗದ ನಿರುದ್ಯೋಗಿ ಯುವತಿಯರಿಗೆ ಟೈಲರಿಂಗ್ ಉಚಿತ ಯಂತ್ರೋಪಕರಣ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದರು.
ನಿಗಮದಿಂದ ಇಂತಹ ಸ್ವಯಂ ಉದ್ಯೋಗ ಪ್ರೋತ್ಸಾಹ ಕಾರ್ಯಕ್ರಮಗಳು ಸಮಾಜದ ಹಿಂದುಳಿದ ವರ್ಗದ ಮಹಿಳೆಯರ ಜೀವನಮಟ್ಟ ಸುಧಾರಿಸಲು ನೆರವಾಗಲಿವೆ. ಪ್ರತಿ ಮಹಿಳೆಯೂ ಆರ್ಥಿಕವಾಗಿ ಸ್ವಾವಲಂಬಿಯಾಗಲು ಇಂತಹ ಜನಪರ ಯೋಜನೆಗಳು ಮತ್ತಷ್ಟು ಶಕ್ತಿ ತುಂಬಲಿವೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಕೆ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಮೈಸೂರು ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ವಿಜಯ ಕುಮಾರ್, ಮುಖಂಡ ನಾಗರಾಜು ಇದ್ದರು.