ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಪ್ರೌಢ ಮಕ್ಕಳಿಗೆ ಎನ್‌ಜಿಒ ಸಹಯೋಗದಲ್ಲಿ ಉಚಿತ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ನೀಡಲು ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 
ಮೈಸೂರು

ಉಚಿತ ಎಚ್‌ಪಿವಿ ಲಸಿಕೆ ನೀಡಲು ಸರ್ಕಾರ ಸಹಕಾರ: ದಿನೇಶ್ ಗುಂಡೂರಾವ್

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರನ್ನು ಬಾಧಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ತಡೆಯಲು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆ
  • ಈಗಾಗಲೇ ಖಾಸಗಿ ಆಸ್ಪತ್ರೆಯವರ ಹಲವಾರು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ
ಮೈಸೂರು: ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಪ್ರೌಢ ಮಕ್ಕಳಿಗೆ ಎನ್‌ಜಿಒ ಸಹಯೋಗದಲ್ಲಿ ಉಚಿತ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ನೀಡಲು ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಮೈಸೂರು ಅಸೋಸಿಯೇಷನ್ ಫಾರ್ ಹಾಸ್ಪಿಟಲ್, ನರ್ಸಿಂಗ್ ಹೋಮ್, ಡಯಾಗ್ನೋಸ್ಟಿಕ್ಸ್ ಮತ್ತು ಕ್ಲಿನಿಕ್ಸ್ (ಮಹಾನ್) ವತಿಯಿಂದ ನಗರ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಮಹಿಳೆಯರನ್ನು ಬಾಧಿಸುತ್ತಿರುವ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ತಡೆಯಲು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆ ನೀಡಲಾಗುತ್ತಿದೆ ಎಂದರು.
ಐತಿಹಾಸಿಕ ಮತ್ತು ಸಾಂಸ್ಕೃತಿಕ ನಗರವೆಂಬ ಹಿರಿಮೆ ಹೊಂದಿರುವ ಮೈಸೂರು ಆರೋಗ್ಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಆರೋಗ್ಯ ಕ್ಷೇತ್ರದಲ್ಲಿ ನಿತ್ಯ ಹೊಸ ಸಮಸ್ಯೆ ಬರುತ್ತಲೇ ಇರುತ್ತದೆ. ಅದಕ್ಕೆ ಪರಿಹಾರ ಹುಡುಕುತ್ತಲೇ ಇರಬೇಕು. ಇದು ನಿರಂತರ ಪ್ರಕ್ರಿಯೆ. ಈಗಾಗಲೇ ಖಾಸಗಿ ಆಸ್ಪತ್ರೆಯವರ ಹಲವಾರು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ ಎಂದು ತಿಳಿಸಿದರು.
ಸರ್ಕಾರದೊಂದಿಗೆ ನೀವು ಸೇರಿ ಬಡವರ ಹಾಗೂ ಮಧ್ಯಮ ವರ್ಗದವರ ಆರೋಗ್ಯ ಸುಧಾರಣೆ ಕೆಲಸ ಮಾಡಬೇಕು. ಈಗ ಸಣ್ಣ ನಗರದಲ್ಲಿಯೂ ಉತ್ತಮ ಆರೋಗ್ಯ ಸೇವೆ ಸಿಗುತ್ತಿದೆ. ಇದು ಉತ್ತಮ ಬೆಳವಣಿಗೆ. ಹಲವಾರು ಹೊಸ ರೋಗಗಳನ್ನು ಜನರ ಅನುಕೂಲಕ್ಕಾಗಿ ಆಯುಷ್ಮಾನ್ ಭಾರತ ಅಡಿಗೆ ತಂದಿದ್ದು, ಜನರ ಜೀವ ಉಳಿಸಲು ಎಲ್ಲರ ಪ್ರಯತ್ನ ಮಾಡಬೇಕಿದೆ ಎಂದರು.
ಮಹಾನ್ ಸಂಸ್ಥೆಯ ಪದಾಧಿಕಾರಿಗಳ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು. ಮಹಾನ್ ಸಂಸ್ಥೆಯ ಪದಾಧಿಕಾರಿಗಳಾದ ಡಾ.ಆರ್.ಎನ್.ರಾಜೀವ್, ಡಾ.ಜಿ.ಆರ್.ಚಂದ್ರಶೇಖರ್, ಡಾ.ಜಾವೀದ್ ನಯೀಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಇನ್ನಿತರರಿದ್ದರು.
ಮಹಾನ್ ಸಂಸ್ಥೆ ವತಿಯಿಂದ ನಗರ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.  ಡಾ.ಜಿ.ಆರ್.ಚಂದ್ರಶೇಖರ್, ಡಾ.ಜಾವೀದ್ ನಯೀಂ ಇನ್ನಿತರರಿದ್ದರು.