ಎಚ್.ಕೃಷ್ಣೇಗೌಡ 
ಮೈಸೂರು

ಸರ್ಕಾರಿ ನೌಕರರ ಸಂಘದ ವಾರ್ಷಿ ಮಹಾಸಭೆ ಇಂದು

ಪಿರಿಯಾಪಟ್ಟಣ: ಜ.3 ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಪಿರಿಯಾಪಟ್ಟಣ ತಾಲೂಕು ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯನ್ನು ಕರೆಯಲಾಗಿದೆ ಎಂದು ಸಂಘದ ಅಧ್ಯಕ್ಷ ಎಚ್.ಕೃಷ್ಣೇಗೌಡ ತಿಳಿಸಿದ್ದಾರೆ.
ವಾರ್ಷಿಕ ಮಹಾಸಭೆಯ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆ ವತಿಯಿಂದ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು ತಾಲೂಕಿನ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ವರ್ಗದವರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಪ್ರಕಟಣೆಯಲ್ಲಿ ಮಾಡಿದ್ದಾರೆ.