ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಪ್ರತಿಪಕ್ಷದ ಬಾಯಿ ಮುಚ್ಚಿಸಲು ರಾಜ್ಯ ಸರ್ಕಾರ ದ್ವೇಷ ಭಾಷಣದ ಕಾಯ್ದೆ ಜಾರಿಗೆ ತರಲು ಮುಂದಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತಂದ ಮಾತ್ರಕ್ಕೆ ಪ್ರತಿಪಕ್ಷದವರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಡಿ.20ರ ನಂತರ ಮಾತನಾಡುತ್ತೇನೆ. ಮಹತ್ವದ ವಿಚಾರ ಮಾತನಾಡುವುದಿದೆ. ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರೂ ಏನು ಪ್ರಯೋಜನ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 2 ವರ್ಷಗಳ ಅವಧಿಯಲ್ಲಿ 2800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಾರು ಗಮನಹರಿಸುತ್ತಿಲ್ಲ. ಸಹಕಾರಿ ಬ್ಯಾಂಕ್‌ಗಳಲ್ಲಿ 32 ಲಕ್ಷ ರೈತರಿಗೆ 24 ಸಾವಿರ ಕೋಟಿ ಹಣ ಕೊಡುತ್ತೇನೆ ಅಂದಿದ್ದರು, ಆದರೆ 12 ಸಾವಿರ ಕೋಟಿ ಮಾತ್ರ ಕೊಟ್ಟಿದ್ದಾರೆ. ಇದು ರಾಜ್ಯ ಸರ್ಕಾರದ ವೈಫ್ಯಲ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.