ತಿ.ನರಸೀಪುರ ತಾಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಿಬಿರವನ್ನು ಡಾ.ಎಂ.ರೇವಣ್ಣ ಉದ್ಘಾಟಿಸಿದರು. ಕೆ.ಎನ್.ಅಶೋಕ್, ಎಸ್.ಮಂಜುನಾಥ್, ಕೈಯಂಬಳ್ಳಿ ಕೃಷ್ಣ, ಎಂ.ಸಿದ್ಧಪ್ಪ, ರುಕ್ಮಿಣಿ ಇತರರು ಇದ್ದರು.
- ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ರೇವಣ್ಣ
- ಕೈಯಂಬಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ತಿ.ನರಸೀಪುರ: ದೇಶದ ಅಭಿವೃದ್ಧಿ ಗುಣಮಟ್ಟದ ಶಿಕ್ಷಣ ಹಾಗೂ ಆರೋಗ್ಯದ ಮೇಲೆ ಅವಲಂಬನೆ ಆಗಿರುವುದರಿಂದ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಆರೋಗ್ಯ ಅತ್ಯಗತ್ಯ ಎಂದು ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ರೇವಣ್ಣ ಹೇಳಿದರು.
ತಾಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜಿ.ಎಸ್.ಎಸ್.ಎಸ್. ಸಿಂಹಸುಬ್ಬ ಮಹಾಲಕ್ಷ್ಮೀ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸೋಸಲೆ ಜನಸ್ಪಂದನಾ ಸೇವಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುವ ಯಾವುದೇ ಸರ್ಕಾರ ಮೊದಲು ಶಿಕ್ಷಣ ಮತ್ತು ಆರೋಗ್ಯವನ್ನು ಮೂಲಭೂತ ಹಕ್ಕನ್ನಾಗಿ ನೀಡುವ ಮೂಲಕ ಸದೃಢ ದೇಶವನ್ನು ನಿರ್ಮಾಣ ಮಾಡಬೇಕು ಎಂದರು.
ವಿದ್ಯಾರ್ಥಿಗಳಲ್ಲಿ ಸೇವಾ ಭಾವನೆ ಮೂಡಿಸುವುದರ ಜತೆಗೆ ಅವರ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಮಹತ್ವದ ಪಾತ್ರ ವಹಿಸಲಿವೆ ಎಂದರು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಯುವ ಅಧ್ಯಕ್ಷ ಕೆ.ಎನ್.ಅಶೋಕ್, ಜನಸ್ಪಂದನ ಸೇವಾ ಸಂಸ್ಥೆ ಅಧ್ಯಕ್ಷ ಎಸ್.ಮಂಜುನಾಥ್, ಉಪಾಧ್ಯಕ್ಷ ಕೈಯಂಬಳ್ಳಿ ಕೃಷ್ಣ, ಕಾರ್ಯದರ್ಶಿ ಆಲಗೂಡು ಎಂ.ಸಿದ್ದಪ್ಪ, ನಿರ್ದೇಶಕರಾದ ಕೆ.ರುಕ್ಮಿಣಿ, ಆಟೋ ಸಿದ್ದರಾಜು, ಗಿರಿಯಪ್ಪ, ಎಚ್.ಆರ್.ಪುನೀತ್‌ಕುಮಾರ್, ಎನ್.ರವಿಕಿರಣ್, ಟಿ.ಎಂ.ನಾಗರತ್ನಾ ಇತರರಿದ್ದರು.