ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸುತ್ತಿರುವುದು.
ಹನಗೋಡು : ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಗಮನ ಹರಿಸಬೇಕು ಎಂದು ಹನಗೋಡಿನ ಲಕ್ಷ್ಮಣ ತೀರ್ಥ ವಿದ್ಯಾಸಂಸ್ಥೆ ಕಾರ್ಯದರ್ಶಿ ನಟರಾಜು ಹೇಳಿದರು.
ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾನುವಾರ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಉತ್ತಮ ಅಭ್ಯಾಸವಾಗಿದೆ ಎಂದರು.
ಒತ್ತಡದ ಬದುಕಿನಲ್ಲಿ ಯೋಗವು ಮನಸ್ಸಿಗೆ ನೆಮ್ಮದಿ ಹಾಗೂ ದೇಹಕ್ಕೆ ಚೈತನ್ಯವನ್ನು ನೀಡುವ ಶಕ್ತಿಯನ್ನು ಹೊಂದಿದೆ. ಹಾಗಾಗಿ ಎಲ್ಲರೂ ದಿನನಿತ್ಯದ ಜೀವನದಲ್ಲಿ ಯೋಗ ಮತ್ತು ಧ್ಯಾನವನ್ನು ಅಳವಡಿಸಿಕೊಳ್ಳಬೇಕು ಎಂದರು.
ದೈಹಿಕ ಶಿಕ್ಷಣ ಶಿಕ್ಷಕ ಸಂಜಯ್ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾಯೋಗಿಕ ತರಬೇತಿ ನೀಡಿದರು. ನಂತರ ಮಾತನಾಡಿದ ಅವರು, ಯೋಗವು ಮನುಷ್ಯನ ಆರೋಗ್ಯದ ಪಅಲನೆಯಲ್ಲಿ
ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಆರೋಗ್ಯ ಪಾಲನೆಗೆ ಯಾವ ಯಾವ ಯೋಗಾಸನಗಳನ್ನು ಅಭ್ಯಾಸ ಮಾಡಬೇಕು ಹಾಗೂ ಅವು ದೇಹದ ವಿವಿಧ ಅಂಗಗಳ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಮುಖ್ಯ ಶಿಕ್ಷಕಿ ಪರ್ವೀನ್ ತಾಜ್ ಸೇರಿದಂತೆ
ಶಿಕ್ಷಕರು, ಸಿಬ್ಬಂದಿ ಮತ್ತು ಮಕ್ಕಳು ಭಾಗವಹಿಸಿದ್ದರು.