ತಿ.ನರಸೀಪುರ ಪಟ್ಟಣದ ಜೆಡಿಎಸ್ ಕಛೇರಿಯಲ್ಲಿ ಭಾನುವಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಿಕಟಪೂರ್ವ ಶಾಸಕ ಎಂ.ಅಶ್ವಿನ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರಾಧ್ಯಕ್ಷ ಸಿ.ಬಿ ಹುಂಡಿ ಚಿನ್ನಸ್ವಾಮಿ, ಮುಖಂಡರಾದ ಕಟ್ಟೆಪುರ ಸಿದ್ದಪ್ಪ, ತಿರುಮಕೂಡಲು ಜಯರಾಮ್ ಇತರರು ಇದ್ದರು. 
ಮೈಸೂರು

ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಿಗೆ ಸನ್ಮಾನ

ತಿ.ನರಸೀಪುರ: ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಪಕ್ಷದ ನೂತನ ಜಿಲ್ಲಾಧ್ಯಕರಾಗಿ ಆಯ್ಕೆಗೊಂಡ ನಿಕಟಪೂರ್ವ ಶಾಸಕ ಎಂ.ಅಶ್ವಿನ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷರಾದ ಬಳಿಕ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಆಗಮಿಸಿದ್ದ ಎಂ.ಅಶ್ವಿನ್‌ಕುಮಾರ್ ಅವರನ್ನು ಪಕ್ಷದ ಕಚೇರಿಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸರಳವಾಗಿ ಸನ್ಮಾನಿಸಿ, ಗೌರವಿಸಿದರು.
ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ ಚಿನ್ನಸ್ವಾಮಿ ಮಾತನಾಡಿ, ಸರಳ, ಸಜ್ಜನಿಕೆ ವ್ಯಕ್ತಿತ್ವದಿಂದ ಸಾಮಾನ್ಯ ಜನರ ಕೈಗೆ ಸಿಗುವ ಶಾಸಕರಾಗಿದ್ದ ಎಂ.ಅಶ್ವಿನ್‌ಕುಮಾರ್ ಅವರು ಪಕ್ಷದ ಜಿಲ್ಲಾಧ್ಯಕ್ಷ ಆಗಿರುವುದು ಹೆಮ್ಮೆಯ ವಿಷಯವಾಗಿದೆ. ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಹುಮ್ಮಸ್ಸು ಮೂಡಿದೆ. ಮುಂದಿನ ದಿನ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿ, ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಮುಖಂಡರಾದ ಕಟ್ಟೆಪುರ ಸಿದ್ದಪ್ಪ, ತಿರುಮಕೂಡಲು ಜಯರಾಮ್, ರಾಜೇಶ್, ದ್ವಾರಕೀಶ್, ಮಹದೇವಸ್ವಾಮಿ, ಬೆನಕನಹಳ್ಳಿ ನಾಗೇಶ್ ಹಾಗೂ ಇತರರು ಇದ್ದರು.