ಹುಣಸೂರು ತಾಲೂಕು ಕೆರೆಯೂರು ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಡೆಂಗೆ ದಿನದ ಅಂಗವಾಗಿ ಅರಿವು ಜಾಥಾ ನಡೆಸಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ್, ಗ್ರಾಪಂ ಸದಸ್ಯ ಮಾಜಿ ಜಯಣ್ಣ, ಆರೋಗ್ಯ ಇಲಾಖೆಯ ಇಂದಿರಾ, ಶ್ರೀನಿವಾಸ್ ಮತ್ತಿತರು ಇದ್ದಾರೆ.
- visit the hospital
- National Dengue Day
ಹುಣಸೂರು : ತಾಲೂಕಿನ ಗಾವಡಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆರೆಯೂರು ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಡೆಂಗೆ ದಿನ ಆಚರಿಸಲಾಯಿತು.
ಸೋಮವಾರ ಕೇಂದ್ರದಲ್ಲಿ ಆಯೋಜಿಸಿದ್ದ ಅರಿವು ಜಾಥಾ ಕಾರ್ಯಕ್ರಮಕ್ಕೆ ಆರೋಗ್ಯ ನಿರೀಕ್ಷಣಾಧಿಕಾರಿ ಹನುಮಂತ್ ಚಾಲನೆ ನೀಡಿ ಮಾತನಾಡಿ, ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಸೋಂಕಿತ ಸೊಳ್ಳೆಯು ಆರೋಗ್ಯವಂತ ವ್ಯಕ್ತಿಗೆ ಕಚ್ಚಿದಾಗ ಡೆಂಗೆ, ಚಿಕನ್ ಗುನ್ಯಾ ರೋಗಗಳು ಹರಡುತ್ತವೆ. ವಿಪರೀತ ಜ್ವರ, ಮೈಕೈ ನೋವು, ತಲೆನೋವು, ಕಣ್ಣು ಗುಡ್ಡೆಗಳ ಹಿಂಭಾಗ ನೋವು ಮುಂತಾದವು ರೋಗದ ಲಕ್ಷಣಗಳಾಗಿವೆ. ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ರೋಗದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣ ತೊಟ್ಟಿಗಳು, ಡ್ರಮ್‌ಗಳನ್ನು ವಾರಕ್ಕೆ ಎರಡು ಬಾರಿ ಉಜ್ಜಿ ತೊಳೆದು ನಂತರ ನೀರು ತುಂಬಿ ಮುಚ್ಚಿಡುವುದು ಅಗತ್ಯ. ಜ್ವರದಿಂದ ಬಳಲುತ್ತಿದ್ದರೆ, ಸಮೀಪದ ಆಸ್ಪತ್ರೆಗೆ ತಕ್ಷಣ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿರಿ. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಇಂದಿರಾ, ಧನಲಕ್ಷ್ಮೀ, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಣ್ಣ ಹಾಗೂ ಗ್ರಾಮದ ಮುಖಂಡರು ಮಹಿಳಾ ಸಂಘದ ಸದಸ್ಯರು, ಆಶಾ ಕಾರ್ಯಕರ್ತರು ಹಾಜರಿದ್ದರು