ಕೆ.ಆರ್.ನಗರ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಮಠದಲ್ಲಿ ಆಯೋಜಿಸಿದ್ದ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರ 66ನೇ ವರ್ಷದ ಹುಟ್ಟು ಹಬ್ಬದ ಆಚರಿಸಲಾಯಿತು. ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಇನ್ನಿತರರು ಇದ್ದರು.
- ಗಾವಡಗೆರೆ ಗುರುಲಿಂಗ ಜಂಗಮ ಮಠದ ಶ್ರೀನಟರಾಜ ಸ್ವಾಮೀಜಿ ಹೇಳಿಕೆ
ಕೆ.ಆರ್.ನಗರ: ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯದವರ ಸಂಘಟನೆ ಮಾಡುವಲ್ಲಿ ಶಿವಾನಂದಪುರಿ ಸ್ವಾಮಿಗಳ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಗಾವಡಗೆರೆ ಗುರುಲಿಂಗ ಜಂಗಮ ಮಠದ ಶ್ರೀನಟರಾಜ ಸ್ವಾಮೀಜಿ ಹೇಳಿದರು.
ಪಟ್ಟಣದ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಮಠದಲ್ಲಿ ಸೋಮವಾರ ಆಯೋಜಿಸಿದ್ದ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರ 66ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಆಲೋಚನೆ ಚೆನ್ನಾಗಿದ್ದರೆ ನಮ್ಮ ಆರೋಗ್ಯವು ಚೆನ್ನಾಗಿರಲಿದೆ. ಜನ ಸಾಮಾನ್ಯರ ಬದುಕನ್ನು ಸುಧಾರಣೆ ಮಾಡುವ ಮಹತ್ವದ ಕಾರ್ಯವನ್ನು ಶ್ರೀಗಳು ಮಾಡುತ್ತಿದ್ದು ಜಾತಿ, ಧರ್ಮವನ್ನು ಮೀರಿ ಮಾಡುವಂತಹ ಕೆಲಸ ಅವರ ವಜ್ರ ಮಹೋತ್ಸವವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ, ಬೆಟ್ಟದಪುರದ ಸಲಿಲಖ್ಯ ಮಠದ ಚೆನ್ನಬಸವ ದೇಶಿ ಕೇಂದ್ರ ಸ್ವಾಮೀಜಿ, ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ ಶ್ರೀಗಳಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು.
ಮೈಸೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ಕುರುಬರ ಸಂಘದ ತಾಲೂಕು ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ, ಹುಣಸೂರು ತಾಲೂಕು ಅಧ್ಯಕ್ಷ ಕುನ್ನೇಗೌಡ, ಕೆ.ಆರ್.ಪೇಟೆ ತಾಲೂಕು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಇತರರಿದ್ದರು.