ವಿಶ್ವ ಪರಿಸರ ದಿನದ ಅಂಗವಾಗಿ ಪಿರಿಯಾಪಟ್ಟಣದ ನ್ಯಾಯಾಲಯ ಆವರಣದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ರಾಜು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಎಸ್.ಎಂ.ಧನುರಾಜ್, ಎ.ಎಸ್.ವಿದ್ಯಾ, ಧನಪಾಲ್, ಕರುಣಾಕರ್ ಇತರರು ಇದ್ದಾರೆ.
- ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ರಾಜು ಹೇಳಿಕೆ
ಪಿರಿಯಾಪಟ್ಟಣ: ಮಾನವನ ಉದಾಸೀನತೆಯಿಂದಾಗಿ ಪರಿಸರಕ್ಕೆ ಹೆಚ್ಚಿನ ಹಾನಿ ಉಂಟಾಗುತ್ತಿದೆ ಎಂದು ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ರಾಜು ತಿಳಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದ ನ್ಯಾಯಾಲಯದ ಅವರಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರವನ್ನು ನಾವು ಅತಿ ಸೂಕ್ಷ್ಮವಾಗಿ ಎಚ್ಚರಿಕೆಯಿಂದ ಕಾಪಾಡುವುದರ ಮುಖಾಂತರ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬೇಕಿದೆ ಎಂದರು.
ಪ್ರಕೃತಿಯನ್ನು ರಕ್ಷಿಸುವ ಹಾಗೂ ಸುಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹವಾಮಾನ ಬದಲಾವಣೆ ಹಾಗೂ ಮಾಲಿನ್ಯ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯವಾಗಿದೆ ಎಂದರು.
ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಪರಿಸರ ಸಂರಕ್ಷಣೆಗೆ ಪೂರಕವಾದ ಕ್ರಮಗಳನ್ನು ಅಳವಡಿಸಿಕೊಂಡು ಪರಿಸರದ ಉಳಿವಿಗಾಗಿ ಶ್ರಮ ಪಡಬೇಕಾಗಿದೆ ಎಂದರು.
ಕೃಷಿ ಚಟುವಟಿಕೆಗಳಲ್ಲಿ ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವುದು, ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು, ಮಣ್ಣಿನ ಫಲವತ್ತತೆಯನ್ನು ಹಾಳು ಮಾಡುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯದಿರುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಜಾಗೃತಿ ವಹಿಸಬೇಕಿದೆ ಎಂದರು.
ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಸಿರು ಹೆಚ್ಚಾಗುವಂತೆ ಕ್ರಮ ವಹಿಸುವಂತೆ ಕರೆನೀಡಿದರು.
ಸಿವಿಲ್ ಶ್ರೇಣಿ ನ್ಯಾಯಾಧೀಶರಾದ ಎಸ್.ಎಂ.ಧನುರಾಜ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎ.ಎಸ್.ವಿದ್ಯಾ, ವಲಯ ಅರಣ್ಯಾಧಿಕಾರಿ ಪದ್ಮಶ್ರೀ, ಧನಪಾಲ್, ಕರುಣಾಕರ್, ನ್ಯಾಯಾಲಯದ ಸಿಬ್ಬಂದಿಗಳಾದ ಪ್ರಸನ್ನ, ಸಂಗಮೇಶ್, ಮೆಹಬೂಜ್, ಮಹದೇವ, ಸಿದ್ದು, ಉಮೇಶ್,ಎಂ.ಶುಭ, ಸಕಾಲಿ, ವಿಲಾಸರಾವ್, ಸಂತೋಷ್, ವೀರೇಶ್, ಬೀರೇಶ್, ಶ್ರೀನಿವಾಸ್, ಜಗದೀಶ್, ರವಿ ಸೇರಿದಂತೆ ಇತರರು ಇದ್ದರು.