ಕಬಿನಿ ಜಲಾಶಯಕ್ಕೆ ಒಳ ಹರಿವು ಕ್ಷೀಣ 
ಮೈಸೂರು

ಕಬಿನಿ ಜಲಾಶಯಕ್ಕೆ ಒಳ ಹರಿವು ಕ್ಷೀಣ

ಸದೇಶ್ ಕಾರ್ಮಾಡ್

ವಯನಾಡು ಹಾಗೂ ಜಲಾನಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಮಳೆ ಕ್ಷೀಣಗೊಂಡ ಪರಿಣಾಮ ಕಬಿನಿ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ.

ಗರಿಷ್ಠ 2284 ಅಡಿಗಳಷ್ಟು ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2281.99 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2282.09 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 10,797 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕಪಿಲಾ ನದಿಗೆ 11,042 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಯಾವುದೇ ನೀರನ್ನು ಹರಿಸಲಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 30 ಮಿ.ಮೀ. ಮಳೆಯಾಗಿದೆ.