ಮೈಸೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
2026ರ ಅವಧಿಗೆ ಪ್ರವೇಶ ಪಡೆಯಬಯಸುವವರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿನ ಘಟಕವನ್ನು ಸಂಪರ್ಕಿಸಬಹುದಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಬಿಎಎಂ, ಬಿಕಾಂ ಎಂಎಫ್, ಬಿಎಸ್‌ಸಿಎಂ ಕಾರ್ಯಕ್ರಮಗಳಿಗೆ ವಾರ್ಷಿಕ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇರುವ ಮತ್ತು ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ.50ರಷ್ಟು ವಿನಾಯಿತಿ ಇದೆ ಎಂದು ವಿವಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಬಿ.ಎಸ್.ಶ್ರೀಹರ್ಷ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಾದೇಶಿಕ ಸಹಾಯಕ ನಿರ್ದೇಶಕಿ ಡಾ.ಎಚ್.ಸಿ.ಹೇಮಾ ಮಾಲಿನಿ ಮಾತನಾಡಿ, ಇಂಗ್ನೊ ಬೆಂಗಳೂರು ಪ್ರಾದೇಶಿಕ ಕೇಂದ್ರದ ವೆಬ್‌ಸೈಟ್‌ನಲ್ಲಿ ಅಧ್ಯಯನ ಕೇಂದ್ರಗಳ ವಿವರ ಲಭ್ಯವಿವೆ.
ಎಂಬಿಎಗೆ ಇಗ್ನೊ ನೇರ ಪ್ರವೇಶ ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು. ಸಹ ಸಂಯೋಜಕ ಪ್ರೊ. ಸಿದ್ದರಾಜು ಇದ್ದರು.