ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಗಳನ್ನು ಐಚನಹಳ್ಳಿ ಗ್ರಾಮಸ್ಥರಿಗೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ವಿತರಣೆ ಮಾಡಿದರು. ಮೈಮುಲ್ ನಿರ್ದೇಶಕ ಪ್ರಕಾಶ್, ಕೆಡಿಪಿ ಸದಸ್ಯ ಲಕ್ಷ್ಮೀನಾರಾಯಣ, ಮುಖಂಡ ಮರೀಗೌಡ ಸೇರಿದಂತೆ ಗ್ರಾಮಸ್ಥರು ಇದ್ದರು. 
ಮೈಸೂರು

ಐಚನಹಳ್ಳಿ ಗ್ರಾಮದಲ್ಲಿ ಆಹ್ವಾನ ಪತ್ರಿಕೆ ವಿತರಣೆ

ಎ. ಆರ್. ರಘುರಾಮ
ಬೆಟ್ಟದಪುರ: ಪಿರಿಯಾಪಟ್ಟಣದಲ್ಲಿ ಏ.21ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಪಕ್ಷಭೇದ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಕೋರಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಐಚನಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಗ್ರಾಮಸ್ಥರಿಗೆ ವಿತರಿಸಿ ಅವರು ಮಾತನಾಡಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಾಲಯ ನಿರ್ಮಾಣ, ಕುವೆಂಪು ಭವನ, ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೆರವೇರಿಸಲಿದ್ದಾರೆ.
ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಮೈಮುಲ್ ನಿರ್ದೇಶಕ ಪ್ರಕಾಶ್, ಕೆಡಿಪಿ ಸದಸ್ಯ ಲಕ್ಷ್ಮೀನಾರಾಯಣ, ಮುಖಂಡ ಮರೀಗೌಡ ಸೇರಿದಂತೆ ಗ್ರಾಮಸ್ಥರು ಇದ್ದರು.