ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು ಆಚರಣೆಯಲ್ಲಿ ಆರೋಗ್ಯ ನಿರೀಕ್ಷಕ ಎಚ್.ಎಸ್ ರವಿ ಮಾತನಾಡಿದರು. 
ಮೈಸೂರು

ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ

ಎ. ಆರ್. ರಘುರಾಮ

ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಕೇಂದ್ರದವತಿಯಿಂದ ಇತ್ತೀಚೆಗೆ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು ಆಚರಿಸಲಾಯಿತು.

ಆರೋಗ್ಯ ನಿರೀಕ್ಷಕ ಎಚ್.ಎಸ್ ರವಿ ಮಾತನಾಡಿ, ಮಕ್ಕಳಲ್ಲಿ ಜಂತು ಹುಳುವಿನ ಸೋಂಕಿನಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳು, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಂತು ಹುಳು ನಿವಾರಣಾ ಮಾತ್ರೆಗಳನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸೇವಿಸುವುದರಿಂದ ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ದಿವ್ಯಶ್ರೀ, ಉಷಾ, ಆಶಾ ಕಾರ್ಯಕರ್ತೆಯರಾದ ಭಾರತಿ, ಸೌಮ್ಯ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.