ಮೈಸೂರು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಬುಧವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಯೋಜಿಸಲಾಯಿತು. ಸಿ.ಎನ್. ಮಂಜೇಗೌಡ, ಎ.ಪಿ.ನಾಗೇಶ್, ಡಾ.ರಘುರಾಂ ವಾಜಪೇಯಿ, ತೇಜೇಶ್ ಲೋಕೇಶ್ ಗೌಡ, ಟಿ.ಎಸ್. ಸುಬ್ರಹ್ಮಣ್ಯ, ಎಸ್.ಜಯಪ್ರಕಾಶ್ ಹಾಗೂ ಇತರರು ಇದ್ದರು. 
ಮೈಸೂರು

ಕರ್ನಾಟಕ ಸೇನಾ ಪಡೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಸದೇಶ್ ಕಾರ್ಮಾಡ್
ಮೈಸೂರು: ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಬುಧವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಯೋಜಿಸಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ದೇಶ ಕಂಡ ಮಹಾನ್ ಮಹಾರಾಜ. ಕನ್ನಂಬಾಡಿ ಕಟ್ಟೆ, ಮೈಸೂರು ವಿಶ್ವವಿದ್ಯಾಲಯ ಹಾಗೂ ಶಿವನಸಮುದ್ರ ಜಲ ವಿದ್ಯುತ್ ಸ್ಥಾವರ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದರು. ಜನರ ಹಿತರಕ್ಷಣೆಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಇವರು ರಾಜ್ಯವನ್ನು ವಿಸ್ತರಿಸದೆ, ಅಭಿವೃದ್ಧಿ ಕೆಲಸಗಳನ್ನು ಮಾಡಿ ಶಾಶ್ವತವಾಗಿ ಪ್ರಜೆಗಳ ಮನದಲ್ಲಿ ಉಳಿದರು ಎಂದರು.
ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ಎಪಿಎನ್ ಪ್ರಾಪಟೀಸ್ ಅಧ್ಯಕ್ಷ ಎ.ಪಿ. ನಾಗೇಶ್ ಮೈಸೂರು ಪಾಕ್ ವಿತರಿಸಿದರು. ಹಿರಿಯ ಸಮಾಜ ಸೇವಕ ಡಾ. ರಘುರಾಂ ಕೆ ವಾಜಪೇಯಿ, ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್, ಜೆಡಿಎಸ್ ನಗರಾಧ್ಯಕ್ಷ ಎಸ್‌ಬಿಎಂ ಮಂಜು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು, ಸಮಾಜಸೇವಕ ಎಂ.ಎನ್. ದೊರೆಸ್ವಾಮಿ, ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಟಿ.ಜಿ. ಆದಿಶೇಷ ಗೌಡ ಹಾಗೂ ಇತರರು ಇದ್ದರು.