ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ 
ಮೈಸೂರು

ಮೈಸೂರಿನಲ್ಲಿ ಬಾಂಗ್ಲಾ ನುಸುಳುಕೋರರ ಮೇಲೆ ನಿಗಾ : ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು: ಜಿಲ್ಲೆಯಲ್ಲಿ ಬಾಂಗ್ಲಾ ನುಸುಳುಕೋರರು ಪ್ರವೇಶಿಸದಂತೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು
ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಿಂದ ಬರುತ್ತಿರುವ ವಲಸೆ ಕಾರ್ಮಿಕರ ಮೇಲೆ ತೀವ್ರ ನಿಗಾ ವಹಿಸಿದ್ದು, ನಂಜನಗೂಡು ತಾಲೂಕಿನ ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಪರಿಶೀಲಿಸಲಾಗಿದೆ. ಇದುವರೆಗೂ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿಲ್ಲ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರೌಡಿಶೀಟರ್ ಬಂಧನ: ಬಂಡಿಪಾಳ್ಯ ಎಪಿಎಂಸಿಯಲ್ಲಿ ವ್ಯಾಪಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ರೌಡಿಶೀಟರ್, ಕೈಲಾಸಪುರಂ ನಿವಾಸಿ ಗೌತಮ್ ಅ. ಅಪ್ಪಿಕಾ ಎಂಬಾತನನ್ನು ಬಂಧಿಸಲಾಗಿದೆ. ಈತ ಎಪಿಎಂಸಿ ವ್ಯಾಪಾರಿಗಳು, ತರಕಾರಿ ಲಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ. ಈ ಸಂಬಂಧ ಮೇ ತಿಂಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ 1 ಕೊಲೆ, 4 ಕೊಲೆ ಯತ್ನ ಸೇರಿದಂತೆ 7 ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.