ಎಚ್ ಡಿ ಕೋಟೆ ಪಟ್ಟಣ ತಾಲೂಕು ಪತ್ರಕರ್ತರ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಆರ್. ನಾಗೇಶ್, ಮಂಜು ಕೋಟೆ, ಸಂಘದ ಕಾರ್ಯದರ್ಶಿ ನಿಂಗಣ್ಣ ಕೋಟೆ ಇತರರು ಉಪಸ್ಥಿತರಿದ್ದರು.
ಎಚ್.ಡಿ. ಕೋಟೆ : ಸ್ಪಷ್ಟ, ನಿಖರ ಹಾಗೂ ವಸ್ತುನಿಷ್ಠ ವರದಿಗಳಿಗೆ ಸಮಾಜ ಮನ್ನಣೆ ನೀಡಬೇಕು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಆರ್. ನಾಗೇಶ್ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ಯಾವುದೇ ಒತ್ತಡಕ್ಕೆ ಒಳಗಾಗದೆ ಸತ್ಯ ಪ್ರತಿಪಾದನೆಗೆ ಮಹತ್ವ ನೀಡಬೇಕು ಎಂದರು.
ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಮಂಜು ಕೋಟೆ, ಸಂಘದ ಕಾರ್ಯದರ್ಶಿ ನಿಂಗಣ್ಣ ಕೋಟೆ ಇತರರು ಉಪಸ್ಥಿತರಿದ್ದರು.