ಕೆ.ಆರ್.ನಗರದ ವಾಲ್ಮೀಕಿ ನಾಯಕರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಇಒ ಕುಲದೀಪ್, ಎಚ್.ಎಲ್.ಶಂಕರಮೂರ್ತಿ, ಎಂ.ಎಸ್.ಮಹದೇವ್, ಮಹೇಶ್, ಸೈಯದ್ ಜಾಬೀರ್, ಡಿ.ಶ್ರೀನಿವಾಸ್ ಇದ್ದರು.
ಕೆ.ಆರ್.ನಗರ: ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಮಹತ್ವ ಕೊಡುವಂತಹ ಸಂವಿಧಾನ ಇಲ್ಲದಿದ್ದರೆ ನಾವೆಲ್ಲ ಬದುಕಲು ಸಾಧ್ಯವೇ ಇರುತ್ತಿರಲಿಲ್ಲ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ತಾಲೂಕು ವಾಲ್ಮೀಕಿ ನಾಯಕರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಜನರು ಗೌರವಯುತವಾಗಿ ಬದುಕಲು ಹಕ್ಕುಗಳನ್ನು ನೀಡಿದ ಅಂಬೇಡ್ಕರ್ ಅವರಿಗೆ ನಾವೆಲ್ಲ ಕೃತಜ್ಞರಾಗಿರಬೇಕು ಎಂದು ಹೇಳಿದರು.
ಭಾಷೆ, ಜಾತಿ, ಧರ್ಮ ಮೀರಿ ಎಲ್ಲರಿಗೂ ಸಲ್ಲುವ ಏಕತೆ ಹಾಗೂ ಸಮಾನತೆ ಸಾರುವ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ದೇಶದ ಏಕತೆ, ಸಮಗ್ರತೆ ಕಾಪಾಡಲು ಸಂವಿಧಾನ ಅಗತ್ಯ ಎಂದರು.
ಕೆಲ ದಲಿತ ಮುಖಂಡರು ಎರಡು ವರ್ಷಗಳಿಂದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಿರತಕ್ಷಣಾ ಸಭೆ ಕರೆಯದಿರುವ ಬಗ್ಗೆ ಆಕ್ಷೇಪವ್ಯಕ್ತಪಡಿಸಿದರು. ಆಗ ಶಾಸಕ ಡಿ.ರವಿಶಂಕರ್ ಶೀಘ್ರವಾಗಿ ಎಸ್‌ಸಿ ಮತ್ತು ಎಸ್‌ಟಿ ಸಭೆ ಕರೆಯುವಂತೆ ಸ್ಥಳದಲ್ಲಿದ್ದ ತಹಸೀಲ್ದಾರ್‌ಗೆ ಸೂಚನೆ ನೀಡಿದರು.
ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಮಾತನಾಡಿ, ಸಂವಿಧಾನ ದೇಶದ ಸರ್ವರು ಸಮಾನರು ಹಾಗೂ ಸ್ವತಂತ್ರರು ಎನ್ನುವ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದೆ. ಎಲ್ಲರೂ ಸಂವಿಧಾನವನ್ನು ಗೌರವಿಸೋಣ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಶಾಸಕ ಡಿ.ರವಿಶಂಕರ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಸ್‌ಮಹದೇವ್, ತಾಪಂ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ಪ್ರಾಧ್ಯಾಪಕ ಡಾ.ಪ್ರಭು, ತಾಲೂಕು ಆದಿ ಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್, ನಿವೃತ್ತ ಪ್ರಾಂಶುಪಾಲ ಕೃಷ್ಣ, ದಲಿತ ಮುಖಂಡರಾದ ಹನಸೋಗೆ ನಾಗರಾಜ್, ಶಾಂತಮ್ಮ ರಾಜಯ್ಯ, ತಾಪಂ ಇಒ ಕುಲದೀಪ್, ಬಿಇಒ ಆರ್.ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹೇಶ್, ನಿರ್ದೇಶಕ ಸೈಯದ್ ಅಬೀರ್, ಉಪನ್ಯಾಸಕ ಡಿ.ಶ್ರೀನಿವಾಸ್, ಕಾಂಗ್ರೆಸ್ ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷ ನಂದೀಶ್, ಆರೋಗ್ಯ ರಕ್ಷ ಕಮಿಟಿ ಸದಸ್ಯ ಎಚ್.ಎಚ್.ನಾಗೇಂದ್ರ, ರಾಜ್ಯ ರೈತಪರ್ವ ಸಂಘದ ಗೌರವಾಧ್ಯಕ್ಷ ಜೆ.ಎಂ.ಕುಮಾರ್, ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಗುರುರಾಜ್, ಕೆ.ಪಿ.ಜಗದೀಶ್, ಚಲುವರಾಜ್, ಮಂಜುರಾಜ್, ಎಂ.ಟಿ.ರಾಜೇಶ್, ಬಸವೇಶ್, ಎಂ.ಎಸ್.ಪುಟ್ಟಸ್ವಾಮಿ ಇದ್ದರು.