ಬೆಟ್ಟದಪುರ ಸಮೀಪದ ಹಾರನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ಕೆ.ಮಹದೇವ್ ಅವರ ಸಮ್ಮುಖದಲ್ಲಿ 20ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. 
ಮೈಸೂರು

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ನಾಗೇಶ ಎಸ್
ಬೆಟ್ಟದಪುರ: ಸಮೀಪದ ಹಾರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಮಾಜಿ ಶಾಸಕ ಕೆ.ಮಹದೇವ್ ಅವರ ಸಮ್ಮುಖದಲ್ಲಿ 20ಕ್ಕೂ ಹೆಚ್ಚ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದರು.
ಮಾಜಿ ಶಾಸಕ ಕೆ.ಮಹದೇವ್ ಮಾತನಾಡಿ, ತಾಲೂಕಿನಲ್ಲಿ ಹಲವರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು, ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿದ್ದಾರೆ. 2028ಕ್ಕೆ ತಾಲೂಕಿನ ಜೆಡಿಎಸ್ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಚ್.ಟಿ.ಗೋವಿಂದೇಗೌಡ, ಗೌರಿಶ್, ಎಚ್.ಕೆ.ರಾಜೇಶ್, ಎಚ್.ಕೆ.ಗಿರೀಶ್, ಸಣ್ಣಕಾಳೇಗೌಡ, ರಾಜೇಶ್, ಬಸಂತ್, ಕಿರಣ್ ಕುಮಾರ್, ಚಿಕ್ಕನೇರಳೆ ಸೊಸೈಟಿ ನಿರ್ದೇಶಕ ವಿರೂಪಾಕ್ಷ, ಗ್ರಾ.ಪಂ ಉಪಾಧ್ಯಕ್ಷ ಅನಿಲ್ ಕುಮಾರ್, ಮಾಜಿ ಸದಸ್ಯ ಎಚ್.ಎ.ಪಾರ್ಥ, ಯುವ ಮುಖಂಡ ಪ್ರವೀಣ್‌ಕುಮಾರ್ ಸೇರಿದಂತೆ ಗ್ರಾಮದ ಹಲವು ಯುವಕರು ಇದ್ದರು.