ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ‘ಸಾಮಾಜಿಕ ದುಷ್ಕೃತ್ಯಗಳನ್ನು ನಿಗ್ರಹಿಸುವಲ್ಲಿ ಕಾನೂನು ಆಯಾಮಗಳು’ ವಿಷಯದ ಕುರಿತು ಶನಿವಾರ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮವನ್ನು ಜೆಎಸ್‌ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್. ವಾಣಿಶ್ರೀ ಉದ್ಘಾಟಿಸಿದರು. ಡಾ. ರೇಚಣ್ಣ, ಪಿ.ವಸುಮತಿ ಹಾಗೂ ಇತರರು ಇದ್ದರು. 
ಮೈಸೂರು

ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಮೈಸೂರು: ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಮಹಿಳಾ ಸಬಲೀಕರಣ ಕೋಶದಿಂದ ‘ಸಾಮಾಜಿಕ ದುಷ್ಕೃತ್ಯಗಳನ್ನು ನಿಗ್ರಹಿಸುವಲ್ಲಿ ಕಾನೂನು ಆಯಾಮಗಳು’ ವಿಷಯದ ಕುರಿತು ಶನಿವಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಜೆಎಸ್‌ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್. ವಾಣಿಶ್ರೀ ಕಾರ್ಯಕ್ರಮ ಉದ್ಘಾಟಿಸಿ, ವರದಕ್ಷಿಣೆ ಪದ್ಧತಿಗಳು, ಬಾಲ್ಯವಿವಾಹ, ಅಕ್ರಮ ದತ್ತು ಸ್ವೀಕಾರ, ಲಿಂಗ ಅಸಮಾನತೆ, ವೇಶ್ಯಾವಾಟಿಕೆ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಮಹಿಳೆಯರು ಹಾಗೂ ಹೆಣ್ಣುಮಕ್ಕಳ ಮೇಲೆ ಪರಿಣಾಮ ಬೀರುವ ನಿರ್ಣಾಯಕ ಸಮಸ್ಯೆಗಳ ಮೂಲ ಕಾರಣಗಳು ಮತ್ತು ಸಾಮಾಜಿಕ ಪರಿಣಾಮದ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು.
ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ, ಮಹಿಳಾ ಸಬಲೀಕರಣ ಕೋಶದ ಸಂಚಾಲಕಿ ಪಿ.ವಸುಮತಿ ಹಾಗೂ ಇತರರು ಇದ್ದರು.