ಮೈಸೂರು ತಾಲೂಕು ದೊಡ್ಡಮಾರಗೌಡನಹಳ್ಳಿಯಲ್ಲಿ ಬೋನಿಗೆ ಬಿದ್ದಿರುವ ಚಿರತೆ.
- ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ ಚಿರತೆ
- 10 ದಿನಗಳಿಂದ ಬೋನಿಟ್ಟು ಕಾರ್ಯಾಚರಣೆ
ಮೈಸೂರು: ತಾಲೂಕು ದೊಡ್ಡಮಾರಗೌಡನಹಳ್ಳಿಯಲ್ಲಿ ಸುಮಾರು 8-10 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಮೇಕೆ, ಕುರಿ, ನಾಯಿಗಳನ್ನು ತಿಂದು ಹಾಕಿ, ಜನರಲ್ಲಿ ಭಯಹುಟ್ಟಿಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ 10 ದಿನಗಳಿಂದ ಬೋನಿಟ್ಟು ಸೆರೆಗಾಗಿ ಕಾರ್ಯಾಚರಣೆ ನಡೆಸಿದ್ದರು. ರೈತ ಟಿ.ಕೃಷ್ಣಪ್ಪ ಅವರ ತೋಟದಲ್ಲಿ ಇಟ್ಟಿದ್ದ ಬೋನಿಗೆ ಭಾನುವಾರ ಚಿರತೆ ಬಿದ್ದಿದೆ. ಅದರ ಆರೋಗ್ಯ ಪರೀಕ್ಷಿಸಿದ ಬಳಿಕ ಅದನ್ನು ಕಾಡಿಗೆ ಬಿಡಲಾಗಿದೆ.