ಹನಗೋಡು ಹೋಬಳಿಯ ಶೆಟ್ಟಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಬೆಂಗಳೂರಿನ ಆಚಾರ್ಯ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ಸಮಾಜ ಶಿಬಿರ ಕಾರ್ಯಕ್ರಮವನ್ನು ವರ್ಷ ಹರೀಶ್ ಗೌಡ ಉದ್ಘಾಟಿಸಿದರು. ಡಾ.ಲೋಹಿತ್, ಸುರೇಂದ್ರ, ಸುಭಾಷ್, ವೆಂಕಟರಮಣ ಇತರರು ಇದ್ದರು. 
ಮೈಸೂರು

ಪ್ರತಿಯೊಬ್ಬರೂ ಸಮಾಜ ಸೇವೆಗೆ ಮುಂದಾಗಲಿ

ಲೋಕೇಶ್ ಮನು. ಡಿ
ಹನಗೋಡು: ಸಮಾಜಸೇವೆ ಮಾನವನ ಸಾಮಾಜಿಕ ಆರೋಗ್ಯದ ರಕ್ಷಣೆಗೆ ಮತ್ತು ಬೆಳವಣಿಗೆಗೆ ಅತ್ಯಮೂಲ್ಯ ಕೊಡುಗೆ ನೀಡಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಅವರ ಪತ್ನಿ ವರ್ಷಾ ಹರೀಶ್ ಗೌಡ ತಿಳಿಸಿದರು.
ಹನಗೋಡು ಹೋಬಳಿಯ ಶೆಟ್ಟಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಬೆಂಗಳೂರಿನ ಆಚಾರ್ಯ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವನು ಒಂದು ಸಂಘ ಜೀವಿಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಂತೆ ತನ್ನ ಬದುಕನ್ನು ಹಸನುಗೊಳಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಬೇಕು. ಸಮಾಜಸೇವೆ ನೆಲೆಯಲ್ಲಿ ಸಮುದಾಯ ಅಭಿವೃದ್ಧಿ ಎಂಬ ನೆಲೆಗಟ್ಟಿನ ಮೇಲೆ ಮಾನವನ ಸಾಮಾಜಿಕ ಜೀವನದ ಪ್ರಗತಿಯಾಗಲು ಸಾಧ್ಯ. ಅದು ಒಂದು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪ್ರತಿಯೊಬ್ಬರೂ ಸಮಾಜ ಸೇವೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಅರಿತುಕೊಂಡಾಗ ಮಾತ್ರ ಸಮಾಜದಲ್ಲಿ ಉತ್ತಮ ಬಾಂಧವ್ಯ ಮತ್ತು ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದರು.
ಕಾವೇರಿ ಆಸ್ಪತ್ರೆ ಮುಖ್ಯಸ್ಥ ಡಾ. ಲೋಹಿತ್ ಮಾತನಾಡಿ, ಸಮಾಜ ಕಾರ್ಯದ ಮುಖ್ಯ ಉದ್ದೇಶ ಮಾನವನ ಸಾಮಾಜಿಕ ಜೀವನವನ್ನು ಸಮೃದ್ಧಗೊಳಿಸುವುದು ಮತ್ತು ಸಂತೋಷಕರ ಹಾಗೂ ಆರೋಗ್ಯಕರ ಸಮಾಜವನ್ನು ರೂಪಿಸುವುದಾಗಿದೆ. ಸಮಾಜ ಕಾರ್ಯವು ವ್ಯಕ್ತಿ ಸಮೂಹ ಸಮುದಾಯವನ್ನು ಸ್ವಪ್ರಯತ್ನದ ಮೂಲಕ ಸಾಮಾಜಿಕ ಸಮಸ್ಯೆಗಳಿಂದ ಮುಕ್ತಿಗೊಳಿಸುವ ಪ್ರಾಯೋಗಿಕ ಕೆಲಸವಾಗಿದೆ ಎಂದು ಹೇಳಿದರು.
ವಿದ್ಯಾಸಂಸ್ಥೆ ಮುಖ್ಯಸ್ಥ ಮಿರ್ಶದ್ ರೆಹಮನ್, ಪ್ರೊ.ಕುಮಾರಸ್ವಾಮಿ, ದೀಪಿಕಾ, ಜಾ.ದಳ ತಾಲೂಕು ಅಧ್ಯಕ್ಷ ಸುರೇಂದ್ರ, ತಾ.ಪಂ ಮಾಜಿ ಸದಸ್ಯ ಕೆ.ಗಣಪತಿ, ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್, ನಿವೃತ್ತ ಶಿಕ್ಷಕ ವೆಂಕಟರಮಣ, ಅಪಾಜಿಗೌಡ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.