ಎಚ್.ಡಿ.ಕೋಟೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು. 
ಮೈಸೂರು

ಧ್ಯಾನ, ಪ್ರಾಣಾಯಾಮ ನಿತ್ಯ ಜೀವನದ ಭಾಗವಾಗಲಿ

ಪ್ರಮುಖ ಮುಖ್ಯಾಂಶಗಳು

  • pranayama
ಎಚ್.ಡಿ.ಕೋಟೆ: ದೈಹಿಕ, ಮಾನಸಿಕ ಆರೋಗ್ಯ ಮತ್ತು ಜೀವನೋತ್ಸಾಹವನ್ನು ಯೋಗದಿಂದ ಪಡೆಯಲು ಸಾಧ್ಯ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ ತಿಳಿಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಯೋಗದಿಂದ ಮಾನಸಿಕ ಶಾಂತಿ, ನೆಮ್ಮದಿ ಸಿಗುವುದರಿಂದ ಪ್ರತಿಯೊಬ್ಬರೂ ಯೋಗಾಭ್ಯಾಸದಲ್ಲಿ ತೊಡಗಬೇಕು. ಇದರಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ. ಯೋಗ, ಧ್ಯಾನ, ಪ್ರಾಣಾಯಾಮದಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ. ವಿದ್ಯಾರ್ಥಿಗಳು ಪ್ರತಿ ನಿತ್ಯ ಯೋಗ ಮಾಡುವುದರಿಂದ ಏಕಾಗ್ರತೆ ಹೊಂದಬಹುದು. ಇದರಿಂದ ಕಲಿಕೆಗೆ ಪೂರಕವಾಗಲಿದೆ ಯೋಗದ ಮಹತ್ವವನ್ನು ತಿಳಿಸಿದರು.
ಮೈಸೂರು ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಲು, ಅಭಿವೃದ್ಧಿ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ಯೋಗ ಗುರು ಕೃಷ್ಣಮಾಚಾರ್ಯರ ಮೂಲಕ ಯೋಗವನ್ನು ಅಂದು ಅವರು ಪರಿಚಯಿಸಿದರು ಎಂದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಅಜ್ಮತ್ ಉಲ್ಲಾಬೇಗ್, ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಮುಖ್ಯ ಶಿಕ್ಷಕಿ ನಂದಿನಿ, ಲೆಕ್ಕ ಪರಿಶೋಧಕ ಸಂತೋಷ್, ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಎನ್.ನಾಗಣ್ಣ, ಯೋಗಪಟು ಪಳನಿಸ್ವಾಮಿ, ಉಪನ್ಯಾಸಕರಾದ ಸ್ವಾಮಿನಾಯಕ್, ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಕುಮಾರ್, ರಾಜೇಗೌಡ, ಕೈಸರ್ ಪಾಷ ಇದ್ದರು.
ಆದಿಚುಂಚನಗಿರಿ, ಆದರ್ಶ ಪ್ರೌಢಶಾಲೆ, ವಿಶ್ವಭಾರತಿ, ಸೆಂಟ್ ಮೇರಿಸ್, ಸೆಂಟ್ ಜೋಸೆಫ್ ಶಾಲೆಗಳ 800 ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.