ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು. ಎಂ.ಪ್ರಕಾಶ್, ಡಿ.ಮಾಲೇಗೌಡ, ಮಾಲಂಗಿ ಸುರೇಶ್, ಮಹದೇವ, ರಘು, ಗೀತಾ ಇದ್ದರು.
ಭವಿಷ್ಯದ ದೃಷ್ಟಿಯಿಂದ ಮಕ್ಕಳು ಎಲ್ಲ ರೀತಿಯ ಸೃಜನಶೀಲ ಕಲೆಗಳನ್ನು ಅಳವಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಜತೆಗೆ ಮೌಲ್ಯಯುತ ಸಮಾಜ ನಿರ್ಮಾಣ ಮಾಡಲು ಪಣ ತೊಡಬೇಕೆಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶ್ರೀರಾಂಪುರದ ನಿರ್ಮಲ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು ಗ್ರಾಮಾಂತರ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೈಸೂರು ಗ್ರಾಮಾಂತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೈಸೂರು ತಾಲೂಕು ಅಧ್ಯಕ್ಷ ಡಿ.ಮಾಲೇಗೌಡ, ಸರ್ಕಾರಿ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷ ಮಾಲಂಗಿ ಸುರೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹದೇವ, ರಾಜ್ಯ ಪರಿಷತ್ ಸದಸ್ಯ ರಘು, ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿಆರ್‌ಸಿ ಗೀತಾ, ಪಿಎಂ ಪೋಷಣ ಅಭಿಯಾನ ಸಹಾಯಕ ನಿರ್ದೇಶಕ ಮಹದೇವಸ್ವಾಮಿ, ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶಾಮಲಾ ಶಾಂತರಾಜು, ಉಪಾಧ್ಯಕ್ಷೆ ಮಮತಾ, ಆರ್‌ಎಲ್ಎಚ್‌ಪಿ ಸಂಸ್ಥೆಯ ಸರಸ್ವತಿ, ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಲಿಂಗರಾಜು ಇದ್ದರು.