ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. 
ಮೈಸೂರು

ಸಮಾಜಮುಖಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್
  • ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಬೆಟ್ಟದಪುರ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಾಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಸಲಹೆ ನೀಡಿದರು.
ಸಮೀಪದ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಎನ್ನೆಸ್ಸೆಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಇದು ಮಹತ್ವದ ವೇದಿಕೆಯಾಗಿದೆ ಎಂದರು.
ಶಿಬಿರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಶಿಬಿರಾರ್ಥಿಗಳಿಗೆ ತಂಡಗಳಾಗಿ ವಿಂಗಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾಲೇಜು ಪ್ರಾಂಶುಪಾಲ ಭರತ್‌ರಾಜ್ ಅರಸ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೃಷ್ಣೇಗೌಡ, ಸದಸ್ಯರಾದ ಸಿ.ಎಸ್.ಪುಟ್ಟರಾಜು, ಕೃಷ್ಣನಾಯಕ, ಸತೀಶ್‌ರಾಜೇ ಅರಸ್, ಚಿಕ್ಕೇಗೌಡ, ಯಶೋಧರ, ರವಿರಾಜೇಅರಸ್, ಅರುಣ್ ರಾಜೇ ಅರಸ್, ಶಿಬಿರಾಧಿಕಾರಿ ರಘುವೀರ್, ಸಹ ಶಿಬಿರಾಧಿಕಾರಿ ಡಾ.ವಿಶ್ವನಾಥ್, ಅಧ್ಯಾಪಕಿ ಕಾವ್ಯಾ ಇತರರಿದ್ದರು.